Monday, December 23, 2024

ಇಡೀ ಭಾರತವಿಂದು ಕಾಶ್ಮೀರದಂತೆ ಭಾಸವಾಗುತ್ತಿದೆ : ಸುಬ್ರಮಣಿಯನ್‌ ಸ್ವಾಮಿ

ಬೆಂಗಳೂರು: ಇಡೀ ಭಾರತವಿಂದು ಕಾಶ್ಮೀರದಂತೆ ಭಾಸವಾಗುತ್ತಿದೆ ಎಂದು ಬಿಜೆಪಿ ರಾಜ್ಯಸಭಾ ಸದಸ್ಯ ಸುಬ್ರಮಣಿಯನ್‌ ಸ್ವಾಮಿ ಟ್ವಿಟ್​​ ಮಾಡುವ ಮೂಲಕ ತಮ್ಮ ಸರ್ಕಾರವನ್ನೇ ಟೀಕಿಸಿದ್ದಾರೆ.

ಪ್ರವಾದಿ ಮಹಮ್ಮದ್‌ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಬಿಜೆಪಿ ಮುಖಂಡೆ ನೂಪುರ್ ಶರ್ಮಾ ಅವರನ್ನು ಬಂಧಿಸುವಂತೆ ಆಗ್ರಹಿಸಿ ದೇಶದ ಹಲವೆಡೆ ಶುಕ್ರವಾರದ ಪ್ರಾರ್ಥನೆ ಬಳಿಕ ಪ್ರತಿಭಟನೆಗಳು ನಡೆದಿವೆ. ಈ ಹಿನ್ನೆಲೆ ‘ಇಡೀ ಭಾರತವಿಂದು ಕಾಶ್ಮೀರದಂತೆ ಭಾಸವಾಗುತ್ತಿದೆ. ಇಡೀ ಭಾರತದಂತೆ ಕಾಶ್ಮೀರವೂ ಇರಬೇಕು ಎಂದು ಅಪೇಕ್ಷಿಸಿದ್ದೆವು. ಈ ಸಮಸ್ಯೆಯ ಪರಿಹಾರಕ್ಕೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರ ಬಳಿ ಯಾವುದಾದರೂ ಸುಳಿವು ಇದೆಯೇ? ಮುಂದಿನ 48 ಗಂಟೆಗಳಲ್ಲಿ ಪರಿಸ್ಥಿತಿ ಹತೋಟಿಗೆ ಬರದಿದ್ದರೆ ಶಾ ಅವರು ಗೃಹ ಸಚಿವರಾಗಿ ಉಳಿಯುತ್ತಾರೆಯೇ? ಪ್ರಧಾನಿ ನರೇಂದ್ರ ಮೋದಿ ಅವರ ನಿರ್ಧಾರಕ್ಕೆ ಬಿಟ್ಟ ವಿಚಾರ’ ಎಂದು ಟ್ವೀಟ್‌ ಮಾಡಿದ್ದಾರೆ.

ಟಿವಿ ಸಂವಾದವೊಂದರಲ್ಲಿ ಬಿಜೆಪಿ ರಾಷ್ಟ್ರೀಯ ವಕ್ತಾರೆಯಾಗಿದ್ದ ನೂಪುರ್‌ ಶರ್ಮಾ ಅವರು ಪ್ರವಾದಿ ಮಹಮ್ಮದ್‌ಗೆ ಅಪಮಾನ ಮಾಡಿದ್ದಾರೆ ಎಂದು ಆರೋಪಿಸಿ ಆರಂಭಗೊಂಡ ಪ್ರತಿರೋಧ ಅಂತರರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡಿದೆ. ಬೆನ್ನಲ್ಲೇ ನೂಪುರ್‌ ಶರ್ಮಾ ಅವರನ್ನು ಪಕ್ಷದಿಂದ ಬಿಜೆಪಿ ಅಮಾನತುಗೊಳಿಸಿದೆ. ನೂಪುರ್‌ ವಿರುದ್ಧ ಎಫ್ಐಆರ್‌ ಕೂಡ ದಾಖಲಾಗಿದೆ.

RELATED ARTICLES

Related Articles

TRENDING ARTICLES