Monday, January 20, 2025

ಸಿಲಿಕಾನ್ ಸಿಟಿಯಲ್ಲಿ ಪುಂಡರ ಅಟ್ಟಹಾಸ

ಬೆಂಗಳೂರು : ಸಿಲಿಕಾನ್​ ಸಿಟಿಯಲ್ಲಿ ಪೆಟ್ರೋಲ್ ಹಾಕಿಸಿಕೊಂಡು ಹಣ ನೀಡದೆ ಮಚ್ಚು ಬೀಸಿದ್ದ ಪುಂಡರನ್ನು ಬ್ಯಾಟರಾಯನಪುರ ಪೊಲೀಸರು ಬಂಧಿಸಿದ್ದಾರೆ.

ಉದಯ್, ಕಿರಣ್ ಬಂಧಿತ ಆರೋಪಿಗಳಾಗಿದ್ದು, ನಾಪತ್ತೆಯಾಗಿರುವ ಮತ್ತೊಬ್ಬ ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಜೂನ್ 2ರ ರಾತ್ರಿ 9.30ರ ಸುಮಾರಿಗೆ ಬಂಕ್​​ನಲ್ಲಿ ಮಚ್ಚು ಬೀಸಿ ಪರಾರಿಯಾಗಿದ್ದರು. ನಯಾರ ಬಂಕ್​​ನಲ್ಲಿ ಪೆಟ್ರೋಲ್ ಹಾಕಿಸಿಕೊಂಡು ಪರಾರಿಯಾಗಿದ್ದರು.

ಬಂಕ್ ಸಿಬ್ಬಂದಿ ಮೇಲೆ ಮಚ್ಚು ಬೀಸಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು , ಬಂಕ್ ಸಿಬ್ಬಂದಿ ನೀಡಿದ್ದ ದೂರಿನನ್ವಯ ಉದಯ್, ಕಿರಣ್​​ನನ್ನು ಬಂಧಿಸಲಾಗಿದೆ. ಈ ಕುರಿತು ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

Related Articles

TRENDING ARTICLES