ಬೆಂಗಳೂರು: ಕರ್ನಾಟಕದಲ್ಲಿ ಕಳೆದ ಹತ್ತು ದಿನಳಿಂದ ಮುಂಗಾರು ದುರ್ಬಲವಾಗಿತ್ತು, ಇದೀಗ ಮಳೆಯ ಅಬ್ಬರ ಹೆಚ್ಚಾಗಿರುವುದರಿಂದ ಕೃಷಿ ಚಟುವಟಿಕೆಯೂ ಚುರುಕುಗೊಂಡಿದೆ.
ನಗರದಲ್ಲಿ ಮಳೆ ಕಡಿಮೆಯಾಗಿ, ಮೋಡ ಮುಸುಕಿದ ವಾತಾವರಣವಿದ್ದು, ಕರಾವಳಿ ಹಾಗೂ ಮಲೆನಾಡಿನಲ್ಲಿ ಜೂನ್ 14ರವರೆಗೆ ಮಳೆ ಹೆಚ್ಚಾಗಲಿದೆ. ಇಂದು ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಕೊಡಗು, ದಕ್ಷಿಣ ಕನ್ನಡ, ಉತ್ತರ ಕನ್ನಡ , ಉಡುಪಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಗುಡುಗು , ಮಿಂಚು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ತಿಳಿಸಿದೆ. ಇಂದು ದಕ್ಷಿಣ ಮಹರಾಷ್ಟ್ರ, ಕರ್ನಾಟಕದ ಉತ್ತರ ಒಳನಾಡು, ಆಂದ್ರಪ್ರದೇಶ ಮತ್ತು ತಮಿಳುನಾಡಿನ ಕೆಲವು ಭಾಗಗಳಲ್ಲಿ ಹೆಚ್ಚು ಮಳೆಯಾಗಲಿದೆ ಎಂದು ತಿಳಿಸಿದೆ.