Monday, January 20, 2025

‘ಕೈ’, ಕಮಲ ವಿರುದ್ದ ಜೆಡಿಎಸ್ ಪ್ರತಿಭಟನೆ

ಬೆಂಗಳೂರು: ರಾಜ್ಯಸಭಾ ಚುನಾವಣೆಯಲ್ಲಿ ಜೆಡಿಎಸ್ ಶಾಸಕರ ಅಡ್ಡ ಮತದಾನ ಹಿನ್ನೆಲೆ ಕಾಂಗ್ರೆಸ್ ಬಿಜೆಪಿ ವಿರುದ್ದ ಜೆಡಿಎಸ್ ಪ್ರತಿಭಟನೆಗೆ ಮುಂದಾಗಿದ್ದಾರೆ.

ನಗರದ ಫ್ರೀಡಂ ಪಾರ್ಕ್ ನಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, ಕಾಂಗ್ರೆಸ್ ಬಿಜೆಪಿ ನಡವಳಿಕೆ ವಿರೋಧಿಸಿ ಜೆಡಿಎಸ್ ಪ್ರತಿಭಟನೆ ನಡೆಸಿದೆ. ಜೊತೆಗೆ ಅಡ್ಡ ಮತದಾನ ಮಾಡಿದ ಗುಬ್ಬಿ ಶ್ರೀನಿವಾಸ್ ಹಾಗೂ ಕೋಲಾರ ಶ್ರೀನಿವಾಸಗೌಡ ವಿರುದ್ದ ಜೆಡಿಎಸ್ ಆಕ್ರೋಶ ವ್ಯಕ್ತಪಡಿಸಿದ್ರು. ಪ್ರತಿಭಟನೆಯಲ್ಲಿ ತಿಪ್ಪೇಸ್ವಾಮಿ, ಕುಪೇಂದ್ರ ರೆಡ್ಡಿ, ಬೆಂಗಳೂರು ಘಟಕದ ಅಧ್ಯಕ್ಷ ಆರ್.ಪ್ರಕಾಶ್ ಸೇರಿ ಹಲವರು ಭಾಗಿಯಾಗಿದ್ದಾರೆ.

RELATED ARTICLES

Related Articles

TRENDING ARTICLES