ನವದೆಹಲಿ: ರಾಷ್ಟ್ರಪತಿ ಚುನಾವಣೆ ದಿನಾಂಕ ಘೋಷಣೆಯಾಗುತ್ತಿದ್ದಂತೆಯೇ, ವಿರೋಧಪಕ್ಷಗಳನ್ನು ಜತೆಗೂಡಿಸಿ ರಣತಂತ್ರ ಹೆಣೆಯಲು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮುಂದಾಗಿದ್ದಾರೆ. ಜೂನ್ 15ರಂದು ಎಲ್ಲರೂ ಹೊಸದಿಲ್ಲಿಯಲ್ಲಿ ಸಭೆ ಸೇರೋಣ ಎಂದು ವಿರೋಧ ಪಕ್ಷಗಳ ನಾಯಕರಿಗೆ ಮಮತಾ ಶನಿವಾರ ಪತ್ರ ಬರೆದಿದ್ದಾರೆ.
ರಾಷ್ಟ್ರಪತಿ ಚುನಾವಣೆಗೆ ಜಂಟಿ ಕಾರ್ಯತಂತ್ರ ರೂಪಿಸಲು ತಯಾರಿ ನಡೆಸುವುದು ಅವರ ಉದ್ದೇಶವಾಗಿದೆ. ನಮ್ಮ ಗೌರವಾನ್ವಿತ ಅಧ್ಯಕ್ಷೆ ಮಮತಾ ಬ್ಯಾನರ್ಜಿ ಅವರು ಪ್ರಗತಿಪರ ವಿರೋಧಪಕ್ಷಗಳ ಬಣಗಳನ್ನು ಸಭೆ ಸೇರಲು ಮತ್ತು ರಾಷ್ಟ್ರಪತಿ ಚುನಾವಣೆಯನ್ನು ಗಮನದಲ್ಲಿ ಇರಿಸಿಕೊಂಡು ಭವಿಷ್ಯದ ನಡೆಯ ಬಗ್ಗೆ ನಿರ್ಧಾರ ತೆಗೆದುಕೊಳ್ಳಲು ಕರೆ ನೀಡಿದ್ದಾರೆ” ಎಂದು ಮಮತಾ ಅವರ ತೃಣಮೂಲ ಕಾಂಗ್ರೆಸ್ ಪಕ್ಷ ಟ್ವೀಟ್ ಮಾಡಿದೆ.
ಹೊಸದಿಲ್ಲಿನ ಕಾನ್‌ಸ್ಟಿಟ್ಯೂಷನ್ ಕ್ಲಬ್‌ನಲ್ಲಿ ಜೂನ್ 15ರ ಮಧ್ಯಾಹ್ನ 3 ಗಂಟೆಗೆ ಸಭೆ ಕರೆಯಲಾಗಿದೆ. ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ, ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಕೇರಳ ಸಿಎಂ ಪಿಣರಾಯಿ ವಿಜಯನ್, ಒಡಿಶಾ ಸಿಎಂ ನವೀನ್ ಪಟ್ನಾಯಕ್, ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್, ತೆಲಂಗಾಣ ಸಿಎಂ ಕೆ ಚಂದ್ರಶೇಖರ್ ರಾವ್, ಜಾರ್ಖಂಡ್ ಸಿಎಂ ಹೇಮಂತ್ ಸೊರೆನ್ ಮತ್ತು ಪಂಜಾಬ್ ಸಿಎಂ ಭಗವಂತ್ ಮಾನ್ ಸೇರಿದಂತೆ 22 ಪ್ರತಿಪಕ್ಷ ನಾಯಕರಿಗೆ ಪತ್ರ ಬರೆಯಲಾಗಿದೆ.
ನಮ್ಮ ಗೌರವಾನ್ವಿತ ಅಧ್ಯಕ್ಷೆ ಮಮತಾ ಬ್ಯಾನರ್ಜಿ ಅವರು ರಾಷ್ಟ್ರಪತಿ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಮುಂದಿನ ಕ್ರಮದ ಬಗ್ಗೆ ಚರ್ಚಿಸಲು ಎಲ್ಲಾ ಪ್ರಗತಿಪರ ವಿರೋಧ ಪಕ್ಷಗಳಿಗೆ ಜೂನ್ 15, 2022 ರಂದು ನವದೆಹಲಿಯ ಕಾನ್ಸ್ಟಿಟ್ಯೂಷನ್ ಕ್ಲಬ್‌ನಲ್ಲಿ ಮಧ್ಯಾಹ್ನ 3 ಗಂಟೆಗೆ ಸಭೆ ಕರೆ ಕರೆದಿದ್ದಾರೆ ಎಂದು ತೃಣಮೂಲ ಕಾಂಗ್ರೆಸ್ ತಿಳಿಸಿದೆ.