Monday, December 23, 2024

ನಮ್ಮ ಪ್ರತಿಭಟನೆಗೆ ಮೋದಿ ಸರ್ಕಾರ ನಡಗುತ್ತಿದೆ : ರಣದೀಪ್ ಸುರ್ಜೇವಾಲಾ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ‘ಸತ್ಯಾಗ್ರಹ ಹೋರಾಟ’ ನಡೆಸಲು ಕಾಂಗ್ರೆಸ್‌ಗೆ ಅನುಮತಿ ನಿರಾಕರಿಸಿದ್ದಕ್ಕಾಗಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕ ರಣದೀಪ್ ಸುರ್ಜೇವಾಲಾ ಅವರು ತೀವ್ರವಾಗಿ ಕಿಡಿಕಾರಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೆಹಲಿಯಲ್ಲಿ ಬಿಜೆಪಿ ಸರ್ಕಾರ ಅಘೋಷಿತ ತುರ್ತುಪರಿಸ್ಥಿತಿ ಹೇರಿದೆ. ಪಕ್ಷದ ಪ್ರತಿಭಟನೆಗೆ ಸರ್ಕಾರ ಅನುಮತಿ ನಿರಾಕರಿಸಿದ್ದು, ಇದೀಗ ರಾಹುಲ್ ಗಾಂಧಿ ನೇತೃತ್ವದಲ್ಲಿ ಜಾರಿ ನಿರ್ದೇಶನಾಲಯದ ಕಚೇರಿಯವರೆಗೆ ಶಾಂತಿಯುತವಾಗಿ ಪ್ರತಿಭಟನಾ ಮೆರವಣಿಗೆ ನಡೆಸುತ್ತೇವೆಂದು ಹೇಳಿದ್ದಾರೆ.

ನಾವು ಸಂವಿಧಾನದ ರಕ್ಷಕರು. ನಾವು ತಲೆಬಾಗುವುದಿಲ್ಲ. ಹೆದರುವುದೂ ಇಲ್ಲ. ನಮ್ಮ ಪ್ರತಿಭಟನೆಗೆ ಮೋದಿ ಸರ್ಕಾರ ನಡುಗುತ್ತಿದೆ ಎಂಬುದು ಅವರ ವರ್ತನೆಯಿಂದ ಸಾಬೀತಾಗುತ್ತಿದೆ. ಕಾಂಗ್ರೆಸ್ ಹೋರಾಟವನ್ನು ಹತ್ತಿಕ್ಕಲು ಕೇಂದ್ರಕ್ಕೆ ಸಾಧ್ಯವಿಲ್ಲ.”ರಾಹುಲ್ ಗಾಂಧಿ ನೇತೃತ್ವದಲ್ಲಿ ಸತ್ಯ ಕಾ ಸಂಗ್ರಾಮ ಮುಂದುವರಿಯುತ್ತದೆ. ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಬ್ರಿಟಿಷರು ಕೂಡ ಕಾಂಗ್ರೆಸ್ ಧ್ವನಿಯನ್ನು ಹತ್ತಿಕ್ಕಲು ಸಾಧ್ಯವಾಗಲಿಲ್ಲ, ಇನ್ನು ಆಡಳಿತಾರೂಢ ಸರ್ಕಾರದಿಂದ ಹೇಗೆ ಸಾಧ್ಯ? ಎಂದು ಪ್ರಶ್ನಿಸಿದ್ದಾರೆ.

RELATED ARTICLES

Related Articles

TRENDING ARTICLES