Thursday, January 23, 2025

ಇಂದು ED ವಿರುದ್ಧ ದೇಶಾದ್ಯಂತ ಕಾಂಗ್ರೆಸ್ ಬೃಹತ್ ಪ್ರತಿಭಟನೆ

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ( ED ) ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ಇಡಿ ವಿಚಾರಣೆ ಎದುರಿಸಲಿದ್ದಾರೆ. ಇದೇ ವೇಳೆ ಕಾಂಗ್ರೆಸ್​​ ಪಕ್ಷದ ಕಾರ್ಯಕರ್ತರರಿಂದ ದೇಶಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಇಂದು ದೆಹಲಿಯ ಕಾಂಗ್ರೆಸ್ ಕಚೇರಿಯಿಂದ ಇಡಿ ಕಚೇರಿವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ಕೈಗೊಳ್ಳಲಾಗಿದೆ. ಅಲ್ಲದೇ ರಾಜ್ಯದಲ್ಲಿಯೂ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆಶಿವಕುಮಾರ ನೇತೃತ್ವದಲ್ಲಿ ಕೆಪಿಸಿಸಿಯಿಂದ ಬೃಹತ್ ಪ್ರತಿಭಟನೆ ಕೈಗೊಳ್ಳಲಾಗಿದೆ.

ಬಿಜೆಪಿ ಸರ್ಕಾರ ಅಧಿಕಾರ ದುರ್ಬಳಕೆ ಮಾಡಿಕೊಂಡು ಸೋನಿಯಾ ಗಾಂಧಿ, ರಾಹುಲ್ ಗಾಂಧಿ ವಿರುದ್ಧ ಇಡಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಕಾಂಗ್ರೆಸ್ ಆರೋಪ ಮಾಡಿದೆ. ಬೆಂಗಳೂರಿನ ಲಾಲ್​ಬಾಗ್ ಡಬಲ್ ರೋಡ್ ಗೇಟ್​ನಿಂದ ಶಾಂತಿನಗರದ ED ಕಚೇರಿವರೆಗೂ ಪ್ರತಿಭಟನಾ ಮೆರವಣಿಗೆ ಮಾಡಲಿದ್ದು, ED ಕಚೇರಿ ಮುಂದೆ ಕಾಂಗ್ರೆಸ್​ ನಾಯಕರು ಸೇರಿ ಹಲವರು ಧರಣಿ ಕೂರಲಿದ್ದಾರೆ.

ಇನ್ನು ದೆಹಲಿಯಲ್ಲಿ ರಾಹುಲ್ ಗಾಂಧಿ ವಿಚಾರಣೆಗೆ ಹಾಜರಾದ ಸಂದರ್ಭದಲ್ಲಿ ಇಡಿ ಕಚೇರಿ ಹೊರಗೆ ಕಾಂಗ್ರೆಸ್ ನಾಯಕರು, ಮುಖಂಡರು ಪ್ರತಿಭಟನೆ ನಡೆಸಲಿದ್ದಾರೆ.

RELATED ARTICLES

Related Articles

TRENDING ARTICLES