Wednesday, January 22, 2025

ಡ್ರಗ್ಸ್​​ ಕೇಸ್​​ : ಬಾಲಿವುಡ್ ನಟಿ ಶ್ರದ್ಧಾ ಕಪೂರ್ ಸಹೋದರ ಸಿದ್ಧಾಂತ್ ಕಪೂರ್ ಬಂಧನ

ಬೆಂಗಳೂರು: ಬಾಲಿವುಡ್ ಖ್ಯಾತ ನಟಿ ಶ್ರದ್ಧಾ ಕಪೂರ್ ಸಹೋದರ ಮತ್ತು ಬಾಲಿವುಡ್ ನಟ, ಡಿಜೆ ಸಿದ್ಧಾಂತ್ ಕಪೂರ್ ಅವರನ್ನು ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬಂಧಿಸಿದ್ದಾರೆ.

ಎಂ.ಜಿ ರಸ್ತೆಯ ಟ್ರಿನಿಟಿ ಸರ್ಕಲ್‍ನಲ್ಲಿ ಪ್ರತಿಷ್ಠಿತ 5 ಸ್ಟಾರ್ ದಿ ಪಾರ್ಕ್ ಹೋಟೆಲ್ ಮೇಲೆ ಹಲಸೂರು ಪೊಲೀಸರು ದಾಳಿ ಮಾಡಿದ್ದಾರೆ. ಈ ವೇಳೆ ಪಾರ್ಟಿಯಲ್ಲಿ ತೊಡಗಿದ್ದ ಯುವಕ ಯುವತಿ ಸೇರಿ ಒಟ್ಟು 50 ಜನರನ್ನ ವಶಕ್ಕೆ ಪಡೆದಿದ್ದಾರೆ. ಈ ಗುಂಪಿನಲ್ಲಿದ್ದ 35 ಜನರಿಗೆ ಮೆಡಿಕಲ್ ಟೆಸ್ಟ್ ಮಾಡಿಸಿದ್ದು, ಐವರು ಡ್ರಗ್ಸ್​​ ಸೇವನೆ ಮಾಡಿರೋದು ದೃಢವಾಗಿದೆ.

ಇನ್ನು ಈ ಐದು ಜನರ ಮೇಲೆ ಪೊಲೀಸರು ಎಫ್ ಐ ಆರ್ ದಾಖಲಿಸಿದ್ದಾರೆ. ಅಲ್ಲದೇ ಬಾಲಿವುಡ್ ನಟನ ಮಗ ಸಿದ್ದಾಂತ್ ಕಪೂರ್ ಡ್ರಗ್ಸ್ ತೆಗೆದುಕೊಂಡಿರುವುದು ಸಾಬೀತಾಗಿದ್ದು, ವೈದ್ಯಕೀಯ ಪರೀಕ್ಷೆ ವೇಳೆ ರಕ್ತದಲ್ಲಿ ಡ್ರಗ್ಸ್ ಪತ್ತೆಯಾಗಿದೆ. ನಟ ಸಿದ್ದಾಂತ್ ಕಪೂರ್ ಬಾಲಿವುಡ್​ನ ಹಿರಿಯ ನಟ ಶಕ್ತಿ ಕಪೂರ್ ಮಗ ಹಾಗೂ ನಟಿ ಶ್ರದ್ಧಾ ಕಪೂರ್ ಸಹೋದರ.

ಹಲಸೂರು ಇನ್ ಸ್ಪೆಕ್ಟರ್ ಮಂಜುನಾಥ್ ನೇತೃತ್ವದಲ್ಲಿ 25ಕ್ಕೂ ಹೆಚ್ಚು ಪೊಲೀಸರು ದಾಳಿ ನಡೆಸಿದ್ದು, 50ಕ್ಕೂ ಹೆಚ್ಚು ಯವಕ ಮತ್ತು ಯುವತಿಯರನ್ನು ವಶಕ್ಕೆ ಪಡೆದು ಮೂರು ಟಿಟಿ ವಾಹನದಲ್ಲಿ ಮೆಡಿಕಲ್ ಪರೀಕ್ಷೆಗೆ ರವಾನೆ ಮಾಡಲಾಗಿದೆ.

ಈ ಹಿಂದೆ ಸಿದ್ದಾಂತ್ ಕಪೂರ್ ಸೋದರಿ, ನಟಿ ಶ್ರದ್ಧಾ ಕಪೂರ್ ಹೆಸರು ಸಹ ಡ್ರಗ್ಸ್ ಜಾಲದಲ್ಲಿ ಕೇಳಿ ಬಂದಿತ್ತು. ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಡ್ರಗ್ಸ್ ಪ್ರಕರಣದ ತನಿಖೆ ನಡೆಸುತ್ತಿರುವ ವೇಳೆ ಶ್ರದ್ಧಾ ಕಪೂರ್, ರಿಯಾ ಚಕ್ರವರ್ತಿ, ಸಾರಾ ಅಲಿ ಖಾನ್, ದೀಪಿಕಾ ಪಡುಕೋಣೆ ಅವರಿಗೆ ನೋಟಿಸ್ ನೀಡಲಾಗಿತ್ತು.

RELATED ARTICLES

Related Articles

TRENDING ARTICLES