Thursday, December 19, 2024

ಅಧಿಕಾರ ಸಿಕ್ಕಾಗ ಕಾಂಗ್ರೆಸ್​​ನವರು ದೇಶವನ್ನು ಲೂಟಿ ಮಾಡ್ತಾರೆ: ಶಾಸಕ ಪಿ ರಾಜೀವ್

ಬೆಳಗಾವಿ : ಅಧಿಕಾರ ಸಿಕ್ಕಾಗ ಕಾಂಗ್ರೆಸ್​​ನವರು ದೇಶವನ್ನು ಲೂಟಿ ಮಾಡುತ್ತಾರೆ. ಅಧಿಕಾರ ಕಳೆದುಕೊಂಡಾಗ ದೇಶದಲ್ಲಿ ಅರಾಜಕತೆಯನ್ನು ಸೃಷ್ಟಿ ಮಾಡುತ್ತಾರೆ ಎಂದು ಕುಡಚಿ ಶಾಸಕ ಪಿ ರಾಜೀವ್ ಕಾಂಗ್ರೆಸ್​​ ವಿರುದ್ಧ ಕಿಡಿಕಾಡಿದ್ದಾರೆ.

ರಾಯಬಾಗ ತಾಲೂಕಿನ ಹಾರೂಗೇರಿ ಪಟ್ಟಣದ ವಿಜಯಾ ಬ್ಯಾಂಕಿನ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಧಿಕಾರ ಸಿಕ್ಕಾಗ ಕಾಂಗ್ರೆಸ್ ಪಕ್ಷ ಈ ದೇಶ ಹಾಗೂ ರಾಜ್ಯವನ್ನು ಲೂಟಿ ಮಾಡುತ್ತದೆ ಹಾಗೂ ಅಧಿಕಾರ ಕಳೆದುಕೊಂಡಾಗ ಈ ದೇಶದಲ್ಲಿ ಅರಾಜಕತೆಯನ್ನು ಸೃಷ್ಟಿ ಮಾಡುತ್ತದೆ ಅಲ್ಲದೆ ಈ ಡಿ ಕಚೇರಿಯ ಮುಂದೆ ಪ್ರತಿಭಟನೆ ಮಾಡಲು ಸೋನಿಯಾ ಗಾಂಧಿ ಮತ್ತು ರಾಜೀವ್ ಗಾಂಧಿಯವರು ಪತ್ರಿಕಾಗೋಷ್ಠಿಯನ್ನು ಕರೆದು ಕಾಂಗ್ರೆಸ್ ನವರಿಗೆ ಪ್ರಚೋದನೆ ನೀಡಿದ್ದಾರೆ ಎಂದು ಆರೋಪಿಸಿದರು.

ಇನ್ನು ಐದು ಸಾವಿರ ಕೋಟಿ ರೂಪಾಯಿಗಳ ಆಸ್ತಿಯನ್ನು ಹೊಂದಿರುವ ಯಂಗ್ ಇಂಡಿಯಾ ಕಂಪನಿಯ ಸಮಗ್ರ ತನಿಖೆಗೆ ಸುಪ್ರೀಂಕೋರ್ಟ್ ಆದೇಶಿಸಿದ್ದು 2012ರಲ್ಲಿ. ಆಗ ನರೇಂದ್ರ ಮೋದಿಯವರು ಇರಲಿಲ್ಲ ಹಾಗೂ ಬಿಜೆಪಿ ಸರ್ಕಾರವು ಅಧಿಕಾರದಲ್ಲಿ ಇರಲಿಲ್ಲ ಇದನ್ನು ಗಮನದಲ್ಲಿ ಇಟ್ಟುಕೊಳ್ಳಬೇಕು. ಜೀಪ್ ಹಗರಣ , 2ಜಿ ಸ್ಪೆಕ್ಟ್ರಮ್ ಹಗರಣ, ಕಲ್ಲಿದ್ದಲು ಹಗರಣ, ಸಬ್ಮರಿನ್ ಹಗರಣ, ಹೆಲಿಕಾಪ್ಟರ್ ಹಗರಣ ಹೀಗೆ ಹಗರಣಗಳ ಸರಮಾಲೆಯನ್ನೇ ಮಾಡಿದ ಕಾಂಗ್ರೆಸ್ ಪಕ್ಷ ದೇಶಕ್ಕೆ ಲಾಭಮಾಡಿಕೊಳ್ಳದೆ ತಮ್ಮ ಸ್ವಾರ್ಥಕ್ಕೆ ಲಾಭ ಮಾಡಿಕೊಂಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

RELATED ARTICLES

Related Articles

TRENDING ARTICLES