Monday, December 23, 2024

ಯೋಗ ಜಾಗತಿಕವಾಗಿ ಅಪಾರ ಜನಪ್ರಿಯತೆ ಗಳಿಸಿದೆ: ಪ್ರಧಾನಿ ಮೋದಿ

ನವದೆಹಲಿ: ಯೋಗವು ಜಾಗತಿಕವಾಗಿ ಅಪಾರ ಜನಪ್ರಿಯತೆಯನ್ನು ಗಳಿಸಿದೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸೋಮವಾರ ಹೇಳಿದ್ದಾರೆ.

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಮೋದಿಯವರು, ನಾಯಕರು, ಸಿಇಒಗಳು, ಕ್ರೀಡಾಪಟುಗಳು ಮತ್ತು ನಟರು ಸೇರಿದಂತೆ ವಿವಿಧ ವಲಯಗಳಲ್ಲಿರುವ ಜನರು ಪ್ರತೀನಿತ್ಯ ಯೋಗವನ್ನು ಅಭ್ಯಾಸ ಮಾಡುತ್ತಿದ್ದಾರೆ. ಯೋಗ ಅವರಿಗೆ ಯಾವ ರೀತಿ ಸಹಾಯ ಮಾಡುತ್ತಿದೆ ಎಂಬುದನ್ನೂ ಹೇಳುತ್ತಿದ್ದಾರೆಂದು ಹೇಳಿದ್ದಾರೆ.

ಇದೇ ವೇಳೆ ಯೋಗದಿಂದ ಆಗುವ ಪ್ರಯೋಜನೆಗಳನ್ನು ಎತ್ತಿ ತೋರಿಸುವ ವಿಡಿಯೋವೊಂದನ್ನೂ ಮೋದಿಯವರು ಹಂಚಿಕೊಂಡಿದ್ದಾರೆ. ಜೂನ್ 21ರಂದು ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮೈಸೂರು ಅರಮನೆ ಆವರಣದಲ್ಲಿ ನಡೆಯುವ ಯೋಗ ದಿನಾಚರಣೆಯಲ್ಲಿ ಭಾಗಿಯಾಗಲಿದ್ದಾರೆ.

ನಿನ್ನೆ ಕೂಡ ಟ್ವೀಟ್ ಮಾಡಿದ್ದ ಮೋದಿಯವರು, ಯೋಗವನ್ನು ನಿಮ್ಮ ದಿನಚರಿಯ ಭಾಗವನ್ನಾಗಿ ಮಾಡಿಕೊಳ್ಳಿ ಎಂದು ಕರೆ ನೀಡಿದ್ದರು.

RELATED ARTICLES

Related Articles

TRENDING ARTICLES