Sunday, January 19, 2025

ಸರಣಿ ಅಪಘಾತ : ಬಿಎಂಟಿಸಿ, ಟೆಂಪೋ ನಡುವೆ ಸಿಲುಕಿದ ಆಟೋ

ಬೆಂಗಳೂರು: ನಗರದ ಮೈಸೂರು ರಸ್ತೆಯಲ್ಲಿರುವ ಸ್ಯಾಟ್ ಲೈಟ್ ಬಸ್ ನಿಲ್ದಾಣದ ಬಳಿ ಕ್ಯಾಂಟರ್, ಬಿಎಂಟಿಸಿ ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಪರಿಣಾಮ ಸ್ಥಳದಲ್ಲಿ ಸಂಚಾರ ದಟ್ಟಣೆ ಎದುರಾಗಿ ವಾಹನ ಸವಾರರು ಕೆಲಕಾಲ ಸಂಕಷ್ಟಕ್ಕೆ ಸಿಲುಕಿದ ಘಟನೆ ಸೋಮವಾರ ನಡೆದಿದೆ.

ಅಪಘಾತಕ್ಕೆ ನಿಖರ ಕಾರಣಗಳು ತಿಳಿದುಬಂದಿಲ್ಲ. ಅಪಘಾತದಲ್ಲಿ ಆಟೋ ಸಂಪೂರ್ಣ ಜಖಂಗೊಂಡಿದ್ದು, ಆಟೋದಲ್ಲಿ ಸಿಲುಕಿದ್ದ ಚಾಲಕನನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆಂದು ತಿಳಿದುಬಂದಿದೆ.

ಘಟನೆಯಲ್ಲಿ ಆಟೋ ಚಾಲಕನ ಕಾಲುಗಳು ಕಟ್ ಆಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಘಟನೆಯಿಂದಾಗಿ ಮೈಸೂರು ರಸ್ತೆಯಲ್ಲಿ ಭಾರೀ ಸಂಚಾರ ದಟ್ಟಣೆ ಎದುರಾಗಿದ್ದು, ಕೆಲಸ ಹಾಗೂ ಕಚೇರಿಗಳಿಗೆ ತೆರಳುತ್ತಿದ್ದ ವಾಹನ ಸವಾರರು ಪರದಾಡುವಂತಹ ಪರಿಸ್ಥಿತಿ ಎದುರಾಗಿದೆ.

RELATED ARTICLES

Related Articles

TRENDING ARTICLES