Monday, December 23, 2024

ರಾಜಧಾನಿಯಲ್ಲಿ ಮತ್ತೆ ಕೊರೋನಾ ಪ್ರತ್ಯಕ್ಷ

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಸೋಂಕಿತರ ಸಂಖ್ಯೆ ಜಾಸ್ತಿಯಾಗುತ್ತಲೇ ಇದೆ. ಹೀಗಾಗಿ ಪೋಷಕರಿಗೆ ಮತ್ತೆ ಕೊರೋನಾ ಆತಂಕ ಹೆಚ್ಚಾಗುತ್ತಿದೆ.

ದಾಸರಹಳ್ಳಿ ವಲಯದ 2 ಶಾಲೆಗಳಲ್ಲಿ ಕೊರೊನಾ ಅಬ್ಬರಿಸಿದ್ದು, ಎರಡು ಶಾಲೆಗಳಲ್ಲಿ 31 ವಿದ್ಯಾರ್ಥಿಗಳಿಗೆ ಕೊರೊನಾ ಅಟ್ಯಾಕ್ ಆಗಿದೆ. ಪಿಣ್ಯ ಎರಡನೇ ಹಂತದ ಖಾಸಗಿ ಶಾಲೆಯ 6ನೇ ತರಗತಿಯ 10 ವಿದ್ಯಾರ್ಥಿಗಳಿಗೆ ಕೊರೊನಾ ದೃಢ ಪಟ್ಟಿದ್ದು, ಜೂನ್ 9 ರಾಜಗೋಪಾಲ್ ನಗರದ ಖಾಸಗಿ ಶಾಲೆಯ 4 & 5 ತರಗತಿಯ ಒಟ್ಟು 21 ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್ ದೃಡಪಟ್ಟಿದೆ. ಕೊರೊನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಶಾಲೆಗೆ ರಜೆ ನೀಡಲಾಗಿದ್ದು, ಎರಡು ಶಾಲೆಯ ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕರಿಗೆ ಮತ್ತು ಸಿಬ್ಬಂದಿಗಳಿಗೆ ಕೊರೊನಾ ಟೆಸ್ಟ್ ಮಾಡಲಾಗಿದೆ.

RELATED ARTICLES

Related Articles

TRENDING ARTICLES