Tuesday, October 22, 2024

ಭಾರತೀಯ ಸೇನೆಗೆ 45 ಸಾವಿರ ‘ಅಗ್ನಿವೀರ’ರ ನೇಮಕ

ಭಾರತೀಯ ಸೇನೆಯಲ್ಲಿ ಕೇಂದ್ರ ಸರ್ಕಾರದಿಂದ ಐತಿಹಾಸಿಕ ಘೋಷಣೆ ಮಾಡಲಾಗಿದೆ.ಇದೇ ಮೊದಲ ಬಾರಿಗೆ ಅಗ್ನಿಪಥ್‌ ಎನ್ನುವ ನೇಮಕಾತಿ ಯೋಜನೆಯನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಘೋಷಣೆ ಮಾಡಿದ್ದಾರೆ. ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಪ್ರಧಾನಿ ಮೋದಿ ಈ ವಿಶೇಷ ಯೋಜನೆಗೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಇನ್ನು ಮುಂದೆ ಸೇನೆಯ ಮೂರೂ ವಿಭಾಗಗಳಲ್ಲಿ ಸೇವೆ ಸಲ್ಲಿಸುವ ನವ ಯುವಕ–ಯುವತಿಯರಿಗೆ ಅವಕಾಶವನ್ನು ನೀಡುವ ಹಾಗೂ ಮಿಲಿಟರಿಯ ಹೊಸ ನೇಮಕಾತಿ ಮಾದರಿ ಯೋಜನೆ ಇದಾಗಿದೆ.

ಯುವಜನರಿಗೆ ಉದ್ಯೋಗಾವಕಾಶ, ದೇಶಪ್ರೇಮ, ಶಿಸ್ತು ಬೆಳೆಸುವ ದೃಷ್ಟಿಯಿಂದ ಹಾಗೂ ಸಂಬಳ, ಪಿಂಚಣಿ ಕಡಿತಗೊಳಿಸುವ ಮೂಲಕ ತುರ್ತು ಶಸ್ತ್ರಾಸ್ತ್ರ ಖರೀದಿಗೆ ಹಣವನ್ನು ಮುಕ್ತಗೊಳಿಸುವ ಉದ್ದೇಶದಿಂದ ಅಗ್ನಿಪಥ್ ಯೋಜನೆಯನ್ನು ಜಾರಿಗೊಳಿಸಲಾಗಿದೆ’ ಎಂದು ರಾಜನಾಥ್ ಸಿಂಗ್ ಹೇಳಿದರು.

ಅಗ್ನಿಪಥ್ ಯೋಜನೆ ವಿಶೇಷತೆ ಏನು..? :

ಸೇನೆಯಲ್ಲಿ 4 ವರ್ಷ ಕಾರ್ಯನಿರ್ವಹಿಸಲು ಅವಕಾಶ
6 ತಿಂಗಳ ತರಬೇತಿಯೊಂದಿಗೆ ನೇಮಕಾತಿ
ಭೂಸೇನೆ, ನೌಕಾಪಡೆ, ವಾಯುಪಡೆಯಲ್ಲೂ ಅವಕಾಶ
17.5 ರಿಂದ 21 ವಯಸ್ಸಿನವರ ನೇಮಕ
ಪ್ರತಿ ವರ್ಷ 50 ಸಾವಿರ ಅಗ್ನಿವೀರರ ನೇಮಕ
30 ರಿಂದ 40 ಸಾವಿರ ಮಾಸಿಕ ವೇತನ ನಿಗದಿ
ಆದರೆ ನಿವೃತ್ತಿ ವೇತನ ಸೌಲಭ್ಯ ಇರುವುದಿಲ್ಲ
48 ಲಕ್ಷದವರೆಗೆ ಇನ್ಸೂರೆನ್ಸ್ ಕೂಡ ಸಿಗುತ್ತೆ

ಸೇನೆಯ ಮೂರು ವಿಭಾಗಗಳಲ್ಲಿ ಆಸಕ್ತ ಯುವಕ–ಯುವತಿಯರು ತರಬೇತಿಯೂ ಸೇರಿದಂತೆ ನಾಲ್ಕು ವರ್ಷದ ಮಟ್ಟಿಗೆ ‘ಅಗ್ನಿವೀರ್’ ಎಂಬ ಹೆಸರಿನ ಯೋಧರಾಗಿ ಕೆಲಸ ಮಾಡಬಹುದಾಗಿದೆ.ನಾಲ್ಕು ವರ್ಷದಲ್ಲಿ ಮೊದಲು 6 ತಿಂಗಳು ಕಠಿಣ ತರಬೇತಿ ಇರುತ್ತದೆ. SSLC ಹಾಗೂ ಪಿಯು ಪಾಸಾದವರು ಅಗ್ನಿವೀರರಾಗಲು ಅರ್ಹರು. ಇದಕ್ಕೆ ದೇಶದಾದ್ಯಂತ ಮೆರಿಟ್ ಆಧಾರದ ಒಂದೇ ಸಾಮಾನ್ಯ ಪ್ರವೇಶ ಪರೀಕ್ಷೆ ಇರಲಿದೆ.

17.5 ವರ್ಷ ಮೇಲ್ಪಟ್ಟ 34 ವರ್ಷ ವಯಸ್ಸಿನ ಒಳಗಿನವರು ದೈಹಿಕವಾಗಿ ಹಾಗೂ ಮಾನಸಿಕವಾಗಿ ಸದೃಢವಾಗಿರುವ ಯುವಕ ಯುವತಿಯರು ಅಗ್ನಿವೀರರಾಗಲು ಅರ್ಜಿ ಸಲ್ಲಿಸಬಹುದು. ಅಗ್ನಿವೀರರಾದ ಪ್ರತಿಯೊಬ್ಬರಿಗೆ ನಾಲ್ಕು ವರ್ಷದ ಅವಧಿಗೆ ಮಾತ್ರ ವರ್ಷಕ್ಕೆ ₹4.62 ಲಕ್ಷದಿಂದ ₹6.92 ಲಕ್ಷದವರೆಗೆ ಸಂಬಳದ ಪ್ಯಾಕೇಜ್ ಇರುತ್ತದೆ. ಅಂದರೆ ತಿಂಗಳಿಗೆ ₹30 ಸಾವಿರದಿಂದ ₹40 ಸಾವಿರವರೆಗೆ ಸಂಬಳ ಸಿಗಲಿದೆ. ಇದರಲ್ಲಿ ಉಚಿತವಾಗಿ ವೈದ್ಯಕೀಯ ವಿಮೆ ದೊರೆಯುತ್ತದೆ.ನಾಲ್ಕು ವರ್ಷ ಸೇವೆ ಸಲ್ಲಿಸಿ ಬಿಡುಗಡೆ ಹೊಂದುವ ಅಗ್ನಿವೀರರಿಗೆ ಸುಮಾರು ₹11.70 ಲಕ್ಷ ಸೇವಾ ನಿಧಿಯಾಗಿ ಕೊಡಲಾಗುತ್ತದೆ. ಇದಕ್ಕೆ ತೆರಿಗೆ ಇರುವುದಿಲ್ಲ.

ಅಗ್ನಿಪಥ್ ಯೋಜನೆ ಪ್ರಕಾರ 45 ಸಾವಿರ ಯುವಜನರನ್ನು ಸೇವೆಗೆ ಸೇರಿಸಿಕೊಳ್ಳಲಾಗುತ್ತದೆ. ಈ ಪೈಕಿ ಶೇ 25 ರಷ್ಟು ಅಗ್ನಿವೀರರು 15 ವರ್ಷ ಅಧಿಕಾರೇತರ ಶ್ರೇಣಿಯಲ್ಲಿ ಕೆಲಸ ಮಾಡುತ್ತಾರೆ. ಹೊರ ಬಂದವರಿಗೆ ದೇಶದ ಕಾರ್ಪೊರೇಟ್ ವಲಯ ಸೇರಿ ನಾನಾ ವಲಯಗಳಲ್ಲಿ ಸೇವೆಗೆ ಆದ್ಯತೆ ಕೊಡಲಾಗುತ್ತದೆ.ಅಗ್ನಿವೀರರು ನಾಲ್ಕು ವರ್ಷದ ಪಯಣದಲ್ಲಿ ಹುತಾತ್ಮರಾದರೆ ಅವರಿಗೆ ವಿಮೆ ಹೊರತುಪಡಿಸಿ 1 ಕೋಟಿ ಪರಿಹಾರ ಕೊಡಲಾಗುತ್ತದೆ.

ಒಟ್ಟಾರೆ ಮುಂದಿನ ಮೂರು ತಿಂಗಳಲ್ಲಿ ಅಗ್ನಿವೀರರ ನೇಮಕಾತಿ ಪ್ರಕ್ರಿಯೆ ಆರಂಭವಾಗಲಿದ್ದು, ಅಗ್ನಿಪಥ್ ಯೋಜನೆ ಯುವಜನರಿಗೆ ಉದ್ಯೋಗಾವಕಾಶಗಳನ್ನು ಕಲ್ಪಿಸಿಕೊಡುವುದಲ್ಲದೇ ದೇಶಪ್ರೇಮ ಬೆಳೆಸಲು ಪ್ರೋತ್ಸಾಹದಾಯಕವಾಗಲಿದೆ ಎನ್ನಲಾಗಿದೆ.

ಬ್ಯೂರೋ ರಿಪೋರ್ಟ್‌ ಪವರ್ ಟಿವಿ

RELATED ARTICLES

Related Articles

TRENDING ARTICLES