Monday, December 23, 2024

ಬೆಂಗಳೂರಲ್ಲಿ ಕೊರೋನಾ ಕೇಸ್ ಏರಿಕೆ : ಪಾಲಿಕೆ ವ್ಯಾಪ್ತಿಯ ಶಾಲೆಗಳಿಗೆ ಮಾರ್ಗಸೂಚಿ ಪ್ರಕಟ

ಬೆಂಗಳೂರು: ಸಿಲಿಕಾನ್​ ಸಿಟಿಯಲ್ಲಿ ಕೊರೋನಾ ಕೇಸ್​ ಏರಿಕೆಯಾದ ಹಿನ್ನೆಲೆಯಲ್ಲಿ BBMP ವ್ಯಾಪ್ತಿಯ ಶಾಲೆಗಳಲ್ಲಿ ಮಾರ್ಗಸೂಚಿ ಪ್ರಕಟಿಸಲಾಗಿದೆ.

ಮುಂಜಾಗ್ರತಾ ಕ್ರಮ ಪಾಲನೆಗೆ ಸೂಚಿಸಿದ ಬಿಬಿಎಂಪಿ ಮಕ್ಕಳಿಗೆ, ಪೋಷಕರಿಗೆ ಪ್ರತ್ಯೇಕ ಮುಂಜಾಗ್ರತಾ ಕ್ರಮಗಳನ್ನು ವಿದ್ಯಾಸಂಸ್ಥೆಗಳಿಗೆ ಮಾರ್ಗಸೂಚಿ ಪ್ರಕಟಿಸಿದ ಬಿಬಿಎಂಪಿ ಕೊರೋನಾಗೆ ಭಯಪಡದೇ ಲಸಿಕೆ ಹಾಕಿಸಿಕೊಳ್ಳಲು ಸಲಹೆಯನ್ನು ನೀಡಿದ್ದಾರೆ.

ವಿದ್ಯಾಸಂಸ್ಥೆಗಳು ಅನುಸರಿಸಬೇಕಾದ ಕ್ರಮಗಳು..?

– ಸಂಸ್ಥೆಯ ದ್ವಾರದಲ್ಲಿ ಎಲ್ಲರಿಗೂ ಕಡ್ಡಾಯವಾಗಿ ಥರ್ಮಲ್ ಸ್ಕ್ರೀನಿಂಗ್
– ಕೊವಿಡ್ ಗುಣಲಕ್ಷಣ ಕಂಡು ಬಂದಲ್ಲಿ ಕೂಡಲೇ ಟೆಸ್ಟ್ ಮಾಡಿಸಬೇಕು
– ಫಲಿತಾಂಶ ಬರುವವರೆಗೂ ಪ್ರತ್ಯೇಕವಾಗಿ ಇರಿಸುವುದು
– ಸಂಸ್ಥೆಯ ಆವರಣದಲ್ಲಿ ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು
– ಸಂಸ್ಥೆಯ ಆವರಣದ ಮುಖ್ಯ ಸ್ಥಳಗಳಲ್ಲಿ ಸ್ಯಾನಿಟೈಸರ್ ಲಭ್ಯತೆ ಖಚಿತಪಡಿಸಿಕೊಳ್ಳುವುದು
– ಸಂಸ್ಥೆಯ ಆವರಣದಲ್ಲಿ ಸ್ವಚ್ಛತೆ ಕಾಪಾಡುವುದು
– ಸಂಸ್ಥೆಯ ಸಿಬ್ಬಂದಿ ಲಸಿಕೆ ಪಡೆದಿರುವುದನ್ನು ಖಚಿತಪಡಿಸಿಕೊಳ್ಳಬೇಕು
– ಲಸಿಕೆ ಪಡೆಯದವರು ಕೂಡಲೇ ಲಸಿಕೆ ಪಡೆಯುವಂತೆ ವ್ಯವಸ್ಥೆ ಮಾಡುವುದು
– ಕೊವಿಡ್-19 ಲಸಿಕೆ ಪಡೆಯುವಂತೆ ಪ್ರೇರೇಪಿಸಿ, ಅಗತ್ಯ ಕ್ರಮ ಕೈಗೊಳ್ಳುವುದು

ವಿದ್ಯಾರ್ಥಿಗಳು, ಪೋಷಕರು ಅನುಸರಿಸಬೇಕಾದ ಕ್ರಮಗಳೇನು..?

– ಮನೆಯಲ್ಲಿರುವ ಎಲ್ಲರೂ ಕೊವಿಡ್-19 ಲಸಿಕೆ ಹಾಕಿಸಿಕೊಳ್ಳಬೇಕು
– ಕೊವಿಡ್ ಲಕ್ಷಣ ಕಂಡು ಬಂದಲ್ಲಿ ಟೆಸ್ಟ್ ಮಾಡಿಸಿಕೊಳ್ಳಬೇಕು
– ಟೆಸ್ಟ್ ಮಾಡಿಸಿದಲ್ಲಿ ಫಲಿತಾಂಶ ಬರುವವರೆಗೂ ಶಾಲೆಗೆ ಕಳುಹಿಸಬೇಡಿ
– ಎಲ್ಲಾ ಅರ್ಹ ಮಕ್ಕಳು ಕೊವಿಡ್-19 ಲಸಿಕೆ ಪಡೆಯಲು ಪ್ರೇರೇಪಿಸುವುದು
– ಹಿರಿಯ ಸದಸ್ಯರ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವುದು

RELATED ARTICLES

Related Articles

TRENDING ARTICLES