Sunday, December 22, 2024

ಲಂಚಕ್ಕೆ ಹೋಗಿದ್ವಾ? ಇಲ್ಲ ಮಂಚಕ್ಕೆ ಹೋಗಿದ್ವಾ? : ಡಿ ಕೆ ಶಿವಕುಮಾರ್‌

ಬೆಂಗಳೂರು : ದೆಹಲಿಯಲ್ಲಿ ಕಾಂಗ್ರೆಸ್‌ ನಾಯಕರ ಮೇಲೆ ಹಲ್ಲೆ ನಡೆದಿದೆ ಎಂದು ರಾಜ್ಯ ನಾಯಕರು ಕೆರಳಿದ್ರು. ಈ ಹಿನ್ನೆಲೆಯಲ್ಲಿ ನಾಳೆ ರಾಜ್ಯಪಾಲರಿಗೆ ದೂರು ನೀಡಿಲು ಸಿದ್ದರಾಮಯ್ಯ, ಡಿಕೆ ಶಿವಕುಮಾರ್‌ ಮುಂದಾಗಿದ್ದಾರೆ.

ರಾಷ್ಟ್ರ ರಾಜಧಾನಿ ದೆಹಲಿಯ ಕಾಂಗ್ರೆಸ್ ಕಚೇರಿಗೆ ತೆರಳುತ್ತಿದ್ದ ವೇಳೆ ಪಕ್ಷದ ನಾಯಕರನ್ನು ಬಂಧಿಸಿರುವ ದೆಹಲಿ ಪೊಲೀಸರ ವಿರುದ್ಧ ರಾಜ್ಯ ಕಾಂಗ್ರೆಸ್ ನಾಯಕರು ತೀವ್ರವಾಗಿ ವಾಗ್ದಾಳಿ ನಡೆಸಿದ್ದಾರೆ. ರಾಹುಲ್ ಗಾಂಧಿ ವಿರುದ್ಧ ಜಾರಿ ನಿರ್ದೇಶನಾಲಯ ಕ್ರಮವನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ದೆಹಲಿ ಪೊಲೀಸರು ಡಿಕೆ ಸುರೇಶ್, ಬಿ.ವಿ.ಶ್ರೀನಿವಾಸ್‌, ದಿನೇಶ್ ಗುಂಡೂ ರಾವ್ ಮತ್ತು ಇತರರ ಮೇಲೆ ಹಲ್ಲೆ ನಡೆಸಿದ್ದಾರೆ. ಇದು ಪ್ರಜಾಪ್ರಭುತ್ವವೋ ಅಥವಾ ಪೊಲೀಸ್ ರಾಜ್ಯವೋ ನಮಗೆ ಗೊತ್ತಿಲ್ಲ. ಇದು ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ನಾವು ಈ ದೇಶದಲ್ಲಿ ತುರ್ತು ಪರಿಸ್ಥಿತಿ ಎದುರಿಸುತ್ತಿದ್ದೇವೆಯೇ?. ನಮ್ಮ ಪಕ್ಷದ ನಾಯಕರನ್ನು ಪೊಲೀಸ್ ಠಾಣೆಗೆ ಕರೆದೊಯ್ದು ಪೊಲೀಸರು ಕೆಟ್ಟದಾಗಿ ನಡೆಸಿಕೊಂಡಿದ್ದಾರೆಂದು ಕಾಂಗ್ರೆಸ್‌ ಆರೋಪ ಮಾಡಿದೆ. ಇಡಿ ತನಿಖೆಯನ್ನು ರಾಜಕೀಯ ಸೇಡಿನ ಕ್ರಮ ಎಂದು ಕಾಂಗ್ರೆಸ್‌ ನಾಯಕರು ಆಕ್ರೋಶ ಹೊರಹಾಕಿದ್ದಾರೆ.
ನಾವೇನು ಕಳ್ಳತನ ಮಾಡೋದಕ್ಕೆ ಹೋಗಿದ್ವಾ..? ಲಂಚಕ್ಕೆ ಹೋಗಿದ್ವಾ..? ಇಲ್ಲ ಮಂಚಕ್ಕೆ ಹೋಗಿದ್ವಾ..?
ದ್ವೇಷ ರಾಜಕಾರಣದಿಂದ ನಮ್ಮನ್ನ ಮುಗಿಸಲು ಹೊರಟಿದ್ದಾರೆ. ಅವ್ರು ಜೈಲಿಗಾದ್ರೂ ಹಾಕಲಿ, ಏನ್ ಬೇಕಾದ್ರೂ ಮಾಡಿಕೊಳ್ಳಲಿ ಎಂದು ಕೇಂದ್ರ ಸರ್ಕಾರಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆಶಿವಕುಮಾರ್‌ ಸವಾಲ್ ಹಾಕಿದ್ದಾರೆ.

ಕಾಂಗ್ರೆಸ್‌ ನಾಯಕರ ಆಕ್ರೋಶಕ್ಕೆ ಸಚಿವ ಆರ್.ಅಶೋಕ್ ತಿರುಗೇಟು ನೀಡಿದ್ದಾರೆ. ರಾಹುಲ್ ಗಾಂಧಿಯನ್ನ ದಿನನಿತ್ಯ ED ವಿಚಾರಣೆ ಮಾಡುತ್ತಿದೆ. ನಮ್ಮ ನಾಯಕರೇ ಜೈಲಿಗೆ ಹೋದ್ರೆ ನಮಗೆ ಇನ್ಯಾರು ದಿಕ್ಕು ಅನ್ನೊ ಆತಂಕ ಕಾಂಗ್ರೆಸ್‌ ನಾಯಕರನ್ನು ಕಾಡುತ್ತಿದೆ. ಹೀಗಾಗಿ ಕೇಂದ್ರ ಸರ್ಕಾರಮತ್ತು ಇಡಿ ವಿರುದ್ಧ ಕಾಂಗ್ರೆಸ್‌ ನಾಯಕರು ಸಲ್ಲದ ಆರೋಪ ಮಾಡುತ್ತಿದ್ದಾರೆ ಅಂತ ತಿರುಗೇಟು ನೀಡಿದ್ರು.

ಕೇಂದ್ರ ಸರ್ಕಾರ ಹಾಗೂ ED ವಿರುದ್ಧ ಕಾಂಗ್ರೆಸ್‌ ನಾಯಕರು ಕೆಂಡಾಮಂಡಲವಾಗಿದ್ದಾರೆ. ಆದ್ರೆ ಪ್ರತಿಭಟನೆ ಹತ್ತಿಕ್ಕುವ ನೆಪದಲ್ಲಿ ದೆಹಲಿಯಲ್ಲಿ ಕಾಂಗ್ರೆಸ್ ನಾಯಕರ ಮೇಲೆ ದಬ್ಬಾಳಿಕೆ ನಡೆಯುತ್ತಿದೆ. ಹೀಗಾಗಿ ದೇಶಾದ್ಯಂತ ರಾಜಭವನಕ್ಕೆ ಮುತ್ತಿಗೆ ಹಾಕುವ ಕಾರ್ಯಕ್ಕೆ ಕಾಂಗ್ರೆಸ್ ನಾಯಕರು ಮುಂದಾಗಿದ್ದಾರೆ.

ಬ್ಯೂರೋ ರಿಪೋರ್ಟ್‌ ಪವರ್‌ ಟಿವಿ

RELATED ARTICLES

Related Articles

TRENDING ARTICLES