Monday, January 27, 2025

ಕೌಟುಂಬಿಕ ಕಲಹ ಹಿನ್ನಲೆ : ಮಕ್ಕಳೊಂದಿಗೆ ಕೃಷಿ ಹೊಂಡಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡ ತಾಯಿ

ವಿಜಯಪುರ: ಕೃಷಿ ಹೊಂಡಕ್ಕೆ ಹಾರಿ ಮೂವರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ತೊರವಿ ತಾಂಡಾ ನಂಬರ್ 1 ರಲ್ಲಿ ನಡೆದಿದೆ. ತೊರವಿ ತಾಂಡಾ 1 ರ 28 ವಯಸ್ಸಿನ ಅನಿತಾ ಪಿಂಟು ಜಾಧವ್, ಮಕ್ಕಳಾದ ಪ್ರವೀಣ್ (6), ಸುದೀಪ್(4) ಹಾಗೂ ಮಮಧಿಕಾ (2) ಮೃತ ಮತಪಟ್ಟಿದ್ದಾರೆ.

ಈ ಕುರಿತು ವಿಜಯಪುರ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ವಿಜಯಪುರ ಗ್ರಾಮೀಣ ಪೊಲೀಸರು ಭೇಟಿ ನೀಡಿದ್ದು, ತನಿಖೆ ಕೈಗೊಂಡಿದ್ದಾರೆ. ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ. ಗಂಡನ ಮನೆಯವರ ಕಿರುಕುಳದಿಂದಲೇ ಬೇಸತ್ತು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡಿದ್ದು, ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ ಘಟನೆಗೆ ಸಂಬಂಧಿಸಿದಂತೆ ತನಿಖೆ ಈಗಾಗಲೇ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಮ್ ಅರಸಿದ್ಧಿ ಹಾಗೂ ವಿಜಯಪುರ ಉಪ ವಿಭಾಗ ಡಿವೈಎಸ್ಪಿ ಲಕ್ಷ್ಮೀನಾರಾಯಣ ಅವರ ನೇತೃತ್ವದಲ್ಲಿ ತಂಡ ರಚನೆ ಮಾಡಿದ್ದು, ಆದಷ್ಟು ಬೇಗ ಘಟನೆಗೆ ಕಾರಣ ಕಂಡು ಹಿಡಿಯುವುದಾಗಿ ತಿಳಿಸಿದರು. ಅಲ್ಲದೆ ಘಟನೆಗೆ ಸಂಬಂಧಿಸಿದಂತೆ ಆರೋಪಿಗಳನ್ನು ದಸ್ತಗಿರಿ ಮಾಡಿ ತನಿಖೆ ನಡೆಸಲಾಗುವುದು ಎಂದು ತಿಳಿಸಿದರು

RELATED ARTICLES

Related Articles

TRENDING ARTICLES