Wednesday, January 22, 2025

ಕಾಶ್ಮೀರಿ ಪಂಡಿತರ ಹತ್ಯೆ ಬಗ್ಗೆ ಸಾಯಿ ಪಲ್ಲವಿ ಹೇಳಿಕೆ; ಬೆಂಬಲಕ್ಕೆ ನಿಂತ ನಟಿ ರಮ್ಯಾ

ಬೆಂಗಳೂರು: ದಕ್ಷಿಣ ಭಾರತ ಚಿತ್ರರಂಗದ ಪ್ರತಿಭಾನ್ವಿತ ನಟಿ ಸಾಯಿ ಪಲ್ಲವಿ ಅವರ ಒಂದು ಹೇಳಿಕೆ ಇದೀಗ ವಿವಾದಕ್ಕೆ ಗುರಿಯಾಗಿದ್ದು ಸಾಮಾಜಿಕ ಮಾಧ್ಯಮಗಳಲ್ಲಿ ಅವರ ಪರ ಮತ್ತು ವಿರೋಧವಾಗಿ ಚರ್ಚೆಗಳು ನಡೆಯುತ್ತಿದೆ.

ಧರ್ಮದ ಹೆಸರಿನಲ್ಲಿ ನಡೆಯುತ್ತಿರುವ ಹಿಂಸಾಚಾರವನ್ನು ಖಂಡಿಸಿರುವ ನಟಿ ಸಾಯಿ ಪಲ್ಲವಿ ಕಾಶ್ಮೀರಿ ಪಂಡಿತರ ಹತ್ಯೆ ಮತ್ತು ಇತ್ತೀಚಿಗೆ ಮುಸ್ಲಿಂ ವ್ಯಕ್ತಿಯೊಬ್ಬರ ಮೇಲಾದ ಹಲ್ಲೆಯನ್ನು ಹೋಲಿಸಿ ಯಾರನ್ನೂ ಧರ್ಮದ ಹೆಸರಲ್ಲಿ ಹಿಂಸಿಸಬಾರದೆಂದಿದ್ದಾರೆ.

ಸಂದರ್ಶನವೊಂದರಲ್ಲಿ ಮಾತನಾಡಿದ ಅವರು ‘ಆ ಸಮಯದಲ್ಲಿ ಕಾಶ್ಮೀರಿ ಪಂಡಿತರನ್ನು ಹೇಗೆ ಕೊಲ್ಲಲಾಯಿತು ಎಂಬುದನ್ನು ಕಾಶ್ಮೀರಿ ಫೈಲ್ಸ್ ಸಿನಿಮಾದಲ್ಲಿ ತೋರಿಸಲಾಗಿದೆ. ನೀವು ಈ ವಿಷಯವನ್ನು ಧಾರ್ಮಿಕ ಸಂಘರ್ಷ ಎಂದು ಪರಿಗಣಿಸುತ್ತಿದ್ದರೆ, ಇತ್ತೀಚೆಗೆ ಗೋವುಗಳನ್ನು ಸಾಗಿಸುತ್ತಿದ್ದ ಮುಸ್ಲಿಂ ಚಾಲಕನನ್ನು ಥಳಿಸಿ ‘ಜೈ ಶ್ರೀ ರಾಮ್’ ಎಂದು ಹೇಳುವಂತೆ ಒತ್ತಾಯಿಸಿದ ಘಟನೆ ನಡೆದಿದೆ. ಹಾಗಾದರೆ ಈ ಎರಡು ಘಟನೆಗಳ ನಡುವಿನ ವ್ಯತ್ಯಾಸ ಎಲ್ಲಿದೆ’ ಎಂದು ಪ್ರಶ್ನಿಸಿದ್ದಾರೆ.

ಅವರ ರಾಜಕೀಯ ಒಲವಿನ ಬಗ್ಗೆ ಕೇಳಲಾದ ಪ್ರಶ್ನೆಗೆ, ತಾವು ತಟಸ್ಥ ಕುಟುಂಬದಲ್ಲಿ ಬೆಳೆದರು. ಮತ್ತು ನಮಗೆ ಉತ್ತಮ ಮನುಷ್ಯರಾಗಿ ಬದುಕಲು ಕಲಿಸಲಾಯಿತು. ನೋಯುತ್ತಿರುವವರನ್ನು ರಕ್ಷಿಸಬೇಕು ಎಂದು ನನಗೆ ಕಲಿಸಲಾಗಿದೆ, ದಮನಿತರನ್ನು ರಕ್ಷಿಸಬೇಕು ಎಂದು ಅವರು ಹೇಳಿದರು.

ಈ ಕುರಿತು ಪ್ರಕಟ ಆಗಿರುವ ಒಂದು ವರದಿಯನ್ನು  ರಮ್ಯಾ ಅವರು ತಮ್ಮ ಟ್ವಿಟರ್​ ಖಾತೆಯಲ್ಲಿ ಶೇರ್​ ಮಾಡಿಕೊಂಡಿದ್ದಾರೆ. ‘ಶೋಷಣೆಗೆ ಒಳಗಾದವರನ್ನು ರಕ್ಷಿಸಬೇಕು’ ಎಂದು ಸಾಯಿ ಪಲ್ಲವಿ ಹೇಳಿರುವ ಮಾತನ್ನು ರಮ್ಯಾ ಪುನಃ ಬರೆದುಕೊಂಡಿದ್ದಾರೆ. ಸತ್ಯ ನುಡಿಯುವ ಧೈರ್ಯ ತೋರಿದ್ದಕ್ಕೆ ತಮ್ಮ ಪ್ರಶಂಸೆ ಇದೆ ಎಂಬರ್ಥದಲ್ಲಿ ಅವರು ಟ್ವೀಟ್​ ಮಾಡಿದ್ದಾರೆ.

RELATED ARTICLES

Related Articles

TRENDING ARTICLES