ಮೈಸೂರು: ಯೋಗ ತವರು, ಮಲ್ಲಿಗೆ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಎರಡು ದಿನಗಳ ಕಾಲ ಭೇಟಿ ನೀಡ್ತಿದ್ದಾರೆ. ಅಂತಾರಾಷ್ಟ್ರೀಯ ಯೋಗ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದು, ಬಳಿಕ ಹಲವು ಕಾರ್ಯಕ್ರಮಗಳಲ್ಲಿ ಪೊಲ್ಗೊಳ್ಳಲಿದ್ದಾರೆ. ಹಾಗಾದ್ರೆ ನರೇಂದ್ರ ಮೋದಿ ಅವ್ರ ಮೈಸೂರು ಪ್ರವಾಸ ಹೇಗಿರುತ್ತೆ..?
ಯೋಗ ತವರು ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಬರ್ತಿದ್ದಾರೆ. ಸಾಂಸ್ಕೃತಿಕ ನಗರಿಯ ಅಂಬಾ ವಿಲಾಸ ಅರಮನೆಯ ಮುಂಭಾಗ ಇದೇ ತಿಂಗಳ 21 ರಂದು ನಡೆಯವ ಅಂತಾರಾಷ್ಟ್ರೀಯ ಯೋಗ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮೈಸೂರಿನ ಕಾರ್ಯಕ್ರಮಗಳು ನಿಗದಿಯಾಗಿವೆ.
ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಜೂ.20ರಂದು ಮೈಸೂರಿಗೆ ಬರಲಿದ್ದಾರೆ. ಸಂಜೆ 3:50ಕ್ಕೆ ಬೆಂಗಳೂರಿನಿಂದ ಮೈಸೂರಿಗೆ ಹೆಲಿಕಾಪ್ಟರ್ ಮೂಲಕ ಹೊರಟು ಸಂಜೆ4:50ಕ್ಕೆ ಆಗಮಿಸಲಿದ್ದಾರೆ. ಸಂಜೆ 5ಕ್ಕೆ ಮಹಾರಾಜ ಕಾಲೇಜು ಮೈದಾನಲ್ಲಿ ಆಯೋಜಿಸಿರುವ ಕೇಂದ್ರ ಯೋಜನಗೆಳ ಫಲಾನುವಿಗಳೊಂದಿಗೆ ಸಂವಾದ ನಡೆಸಿ, ಸಂಜೆ 6:30 ಸುತ್ತೂರು ಮಠಕ್ಕೆ ಭೇಟಿ ಕೊಟ್ಟು, ಮಠದ ಆವರಣದಲ್ಲಿ ವೇದ ಪಾಠಶಾಲೆ ಕಟ್ಟಡ ಲೋಕಾರ್ಪಣೆ ಮಾಡಲಿದ್ದಾರೆ. ರಾತ್ರಿ 7:30ಕ್ಕೆ ಚಾಮುಂಡಿ ಬೆಟ್ಟಕ್ಕೆ ಪ್ರಯಾಣ ಬೆಳೆಸಿ ನಾಡದೇವಿಯ ದರ್ಶನ ಪಡೆದು ವಿಶೇಷ ಪೂಜೆಯಲ್ಲಿ ಭಾಗಿಯಾಗಲಿದ್ದಾರೆ. ರಾತ್ರಿ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಲಿದ್ದಾರೆ.
ಜೂ.21ರಂದು ಬೆಳಗ್ಗೆ 6.30ಕ್ಕೆ ಮೈಸೂರು ಅರಮನೆ ಆವರಣಕ್ಕೆ ಆಗಮಿಸಿ, ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗಿಯಾಗಲಿದ್ದಾರೆ. ಸ್ವತಃ ಯೋಗಾಭ್ಯಾಸ ಮಾಡಲಿರುವ ಪ್ರಧಾನಿ, ಅಂತಾರಾಷ್ಟ್ರೀಯ ಯೋಗ ದಿನದ ಕುರಿತು ಸಂದೇಶ ನೀಡಿ ವಸ್ತುಪ್ರದರ್ಶನಕ್ಕೆ ಚಾಲನೆ ನೀಡಲಿದ್ದಾರೆ.ಮೈಸೂರು ಪ್ರವಾಸದ ಬಳಿಕ ತಿರುವನಂತಪುರಕ್ಕೆ ಪ್ರಯಾಣ ಮಾಡಲಿರುವ ಬಗ್ಗೆ ಪ್ರಧಾನಿ ಕಾರ್ಯಾಲಯ ಮಾಹಿತಿ ನೀಡಿದೆ. ಒಟ್ಟಿನಲ್ಲಿ, ಮೋದಿ ಆಗಮನಕ್ಕಾಗಿ ಸಕಲ ರೀತಿಯಲ್ಲೂ ಸಾಂಸ್ಕೃತಿಕ ನಗರಿ ಸಜ್ಜಾಗಿದ್ದು, ರಸ್ತೆ ಕಾಮಗಾರಿ, ಸ್ವಚ್ಚತಾ ಕಾರ್ಯಗಳು ಭರದಿಂದ ಸಾಗುತ್ತಿವೆ.
ಕ್ಯಾಮರಾ ಮನ್ ಹರೀಶ್ ಜೊತೆ ಸುರೇಶ್ ಬಿ ಪವರ್ ಟಿವಿ ಮೈಸೂರು.