Thursday, December 19, 2024

ದ.ಆಫ್ರಿಕಾ ವಿರುದ್ಧ ಭಾರತಕ್ಕೆ 82 ರನ್​​​ಗಳ ಜಯ

ದಿನೇಶ್ ಕಾರ್ತಿಕ್ ಮತ್ತು ಹಾರ್ದಿಕ್ ಪಾಂಡ್ಯ ಅವರ ಅದ್ಭುತ ಬ್ಯಾಟಿಂಗ್, ಹಾಗೂ ಬೌಲರ್​​ಗಳ ಬಲದಿಂದ ಭಾರತವು ನಾಲ್ಕನೇ ಟಿ-20 ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು 82 ರನ್​​​ಗಳಿಂದ ಸೋಲಿಸಿತು. ಇದರೊಂದಿಗೆ 5 ಪಂದ್ಯಗಳ ಸರಣಿಯಲ್ಲಿ ಭಾರತ 2-2ರಲ್ಲಿ ಸಮಬಲ ಸಾಧಿಸಿದೆ. ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ರಿಷಬ್ ಪಂತ್ ನೇತೃತ್ವದ ಟೀಂ ಇಂಡಿಯಾ ನಿಗದಿತ ಓವರ್​​ನಲ್ಲಿ 6 ವಿಕೆಟ್​​ಗೆ 169 ರನ್ ಗಳಿಸಿತು.

ಇದಕ್ಕೆ ಉತ್ತರವಾಗಿ ದಕ್ಷಿಣ ಆಫ್ರಿಕಾ ತಂಡ 87 ರನ್​​ಗಳಿಗೆ ಕುಸಿಯಿತು. 170 ರನ್​​ಗಳ ಗುರಿ ಬೆನ್ನತ್ತಿದ ದಕ್ಷಿಣ ಆಫ್ರಿಕಾ ತಂಡ ಭಾರತದ ಬೌಲರ್​​ಗಳ ಎದುರು ನಿಲ್ಲಲು ಸಾಧ್ಯವಾಗಲಿಲ್ಲ . ಅವೇಶ್ ಖಾನ್ ದಕ್ಷಿಣ ಆಫ್ರಿಕಾ ತಂಡದ ಬ್ಯಾಟರ್​​ಗಳಿಗೆ ಸಿಂಹಸ್ವಪ್ನರಾದರು.

RELATED ARTICLES

Related Articles

TRENDING ARTICLES