ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆಗೆ ತೆಲಂಗಾಣ ಸಿಎಂ ಕೆಸಿ ಚಂದ್ರಶೇಖರ್ರಾವ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೊಂದು ತಪ್ಪು ನಿರ್ಧಾರ ಎಂದು ಅವರು ಕಿಡಿಕಾರಿದ್ದಾರೆ.
ಈಗಾಗಲೇ ಅಗ್ನಿಪಥ ಯೋಜನೆಗೆ ದೇಶಾದ್ಯಂತ ಆಕ್ರೋಶ ವ್ಯಕ್ತವಾಗ್ತಿದ್ದು, ಉತ್ತರ ಪ್ರದೇಶ, ಬಿಹಾರ, ತೆಲಂಗಾಣದಲ್ಲಿ ರೈಲುಗಳಿಗೆ ಬೆಂಕಿ ಹಚ್ಚಲಾಗಿದೆ. ನಿನ್ನೆ ಸಿಕಂದರಾಬಾದ್ನಲ್ಲಿ 4 ರೈಲು ಇಂಜಿನ್ಗಳಿಗೆ & 3 ಬೋಗಿಗಳಿಗೆ ಉದ್ರಿಕ್ತರು ಬೆಂಕಿ ಹಚ್ಚಿದ್ದರು. ಪರಿಸ್ಥಿತಿ ಪ್ರಕ್ಷುಬ್ಧಗೊಂಡಿತ್ತು. ಪೊಲೀಸರ ಗುಂಡಿನ ದಾಳಿಗೆ ಓರ್ವ ಬಲಿಯಾಗಿದ್ದ. ಈ ಬಗ್ಗೆ ತೀವ್ರ ದಿಗ್ಭ್ರಮೆ ವ್ಯಕ್ತಪಡಿಸಿದ ಕೆಸಿಆರ್, ಮೃತನ ಕುಟುಂಬಕ್ಕೆ 25 ಲಕ್ಷ ಪರಿಹಾರ ಘೋಷಿಸಿದರು.
ಕೇಂದ್ರದ ತಪ್ಪು ನಿರ್ಧಾರಗಳಿಂದ ಯುವಕನ ಸಾವಾಗಿದೆ ಎಂದು ಕಿಡಿಕಾರಿರುವ ತೆಲಂಗಾಣ ಸಿಎಂ, ನಾವು ನಮ್ಮ ರಾಜ್ಯದ ಮಕ್ಕಳನ್ನು ರಕ್ಷಿಸಿಕೊಳ್ಳುತ್ತೇವೆ ಎಂದು ಗುಡುಗಿದ್ದಾರೆ.