ಬೆಂಗಳೂರು: ದ್ವಿತೀಯ ಪಿಯು ಫಲಿತಾಂಶಕ್ಕೆ ಈಗಾಗಲೇ ಕೌಂಟ್ ಡೌನ್ ಶುರುವಾಗಿದೆ.
ಇಂದು ಸುದ್ದಿಗೋಷ್ಠಿಯ ಮೂಲಕ ಶಿಕ್ಷಣ ಸಚಿವ ಬಿಸಿ ನಾಗೇಶ್ ಮಲ್ಲೇಶ್ವರಂನಲ್ಲಿರುವ ಪದವಿ ಪೂರ್ವ ಮಂಡಳಿಯ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಧ್ಯಾಹ್ನ 11:30 ಕ್ಕೆ ಪಿಯು ಫಲಿತಾಂಶ ಪ್ರಕಟ ಮಾಡಲಿದ್ದಾರೆ. ಅದೇರೀತಿ 11:30 ರ ನಂತರ ವಿಧ್ಯಾರ್ಥಿಗಳ ಕೈ ಸೇರಲಿದೆ ಪಿಯು ಫಲಿತಾಂಶ ಹಾಗೆನೇ ಮಧ್ಯಾಹ್ನ 12 ಗಂಟೆ ನಂತರ ಇಲಾಖೆಯ ವೆಬ್‌ಸೈಟ್‌ನಲ್ಲಿ ಫಲಿತಾಂಶ ಪ್ರಕಟವಾಗಲಿದೆ.
ಇನ್ನು, ಎಪ್ರೀಲ್ 23 ರಿಂದ ಮೇ 18ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಒಟ್ಟು 6,84,255 ವಿದ್ಯಾರ್ಥಿಗಳು ಪರೀಕ್ಷೆಗೆ ನೊಂದಣಿ ಮಾಡಿಕೊಂಡಿದ್ರು. 6,83,563 ವಿದ್ಯಾರ್ಥಿಗಳು ಮುಖ್ಯ ಪರೀಕ್ಷೆಗೆ ಹಾಜರಾಗಿದ್ದಾರೆ. ಮಧ್ಯಾಹ್ನ ಆಯಾ ಶಾಲೆಗಳಲ್ಲೂ ಫಲಿತಾಂಶ ಪ್ರಕಟವಾಗಲಿದ್ದು, ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿರುವ ಫೋನ್ ನಂಬರ್‌ಗಳಿಗೆ ಎಸ್‌ಎಂಎಸ್ ಮೂಲಕ ಕೂಡ ಫಲಿತಾಂಶ ಪ್ರಕಟವಾಗಲಿದೆ.