Monday, December 23, 2024

ಗೌಂಡವಾಡ ಧಗಧಗ : ಪೊಲೀಸರ ಕಟ್ಟೆಚ್ಚರ

ಬೆಳಗಾವಿ : ದೇವಸ್ಥಾನ ವಿಚಾರಕ್ಕೆ ಎರಡು ಗುಂಪುಗಳ ಮಧ್ಯೆ ಗಲಾಟೆಯಾಗಿ ದೇಗುಲ ಜಮೀನು ಉಳಿವಿಗಾಗಿ ಹೋರಾಡಿದ್ದ ವ್ಯಕ್ತಿ ಕೊಲೆ ಬೆನ್ನಲ್ಲೇ ಬೆಳಗಾವಿ ಜಿಲ್ಲೆ ಗೌಂಡವಾಡದಲ್ಲಿ ಉದ್ವಿಗ್ನ ವಾತಾವರಣ ಉಂಟಾಗಿದೆ.

ನಗರದಲ್ಲಿ ಹಲವು ಮನೆಗಳಿಗೆ ಕಲ್ಲು ತೂರಾಟ, ವಾಹನಗಳು ಸುಟ್ಟು ಭಸ್ಮವಾಗಿದ್ದು, ಇನ್ನೋವಾ ಕಾರು, ಟ್ರ್ಯಾಕ್ಟರ್​ಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಮೇವಿನ ಬಣವೆಗಳಿಗೆ ಬೆಂಕಿ ಇಟ್ಟ ದುಷ್ಕರ್ಮಿಗಳು, ಮನೆ ಮುಂದೆ ನಿಲ್ಲಿಸಿದ್ದ 30ಕ್ಕೂ ಅಧಿಕ ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ.

ಅದಲ್ಲದೇ, ನಡುರಸ್ತೆಯಲ್ಲಿ ಹೊತ್ತಿ ಉರಿದ ವಾಹನಗಳು ಗ್ರಾಮಕ್ಕೆ ಪೊಲೀಸ್ ಆಯುಕ್ತ ಡಾ.ಬೋರಲಿಂಗಯ್ಯ ಭೇಟಿ ಪರಿಶೀಲನೆ ನಡೆಸಿದ್ದು, ಬೆಂಕಿ ನಂದಿಸಲು ಅಗ್ನಿಶಾಮಕ ಪೊಲೀಸರ ಹರಸಾಹಸ ಪಟ್ಟಿದ್ದಾರೆ. ಗ್ರಾಮದಲ್ಲಿ 200ಕ್ಕೂ ಅಧಿಕ ಪೊಲೀಸರ ನಿಯೋಜಿಸಿದ್ದು, ಈವರೆಗೆ ಐವರು ಕಿಡಿಗೇಡಿಗಳು ವಶಕ್ಕೆ ಪಡೆದುಕೊಂಡಿದ್ದು, ಉಳಿದವರಿಗೆ ಹುಡುಕಾಟ ನಡೆಸುತ್ತಿದ್ದಾರೆ.

RELATED ARTICLES

Related Articles

TRENDING ARTICLES