Monday, May 6, 2024

‘777 ಚಾರ್ಲಿ’ಗೆ ಮಾತ್ರ ವಿನಾಯಿತಿ ಯಾಕೆ..?

ಬಾಕ್ಸ್ ಆಫೀಸ್​​ನಲ್ಲಿ ಯಶಸ್ಸು ಕಂಡಿರುವ ‘777 ಚಾರ್ಲಿ’ ಸಿನಿಮಾಗೆ ಕರ್ನಾಟಕ ಸರ್ಕಾರದಿಂದ ತೆರಿಗೆ ವಿನಾಯಿತಿ ಸಿಕ್ಕಿದೆ. ಇತ್ತೀಚೆಗೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಈ ಚಿತ್ರವನ್ನು ನೋಡಿದ್ದರು. ನಾಯಿ ಮತ್ತು ಮನುಷ್ಯನ ನಡುವಿನ ಬಾಂಧವ್ಯದ ಕಥೆಯನ್ನು ತೆರೆ ಮೇಲೆ ನೋಡಿ ಅವರು ಭಾವುಕರಾಗಿದ್ದರು. ಅದರ ಬೆನ್ನಲ್ಲೇ ಈ ಸಿನಿಮಾಗೆ ತೆರಿಗೆ ವಿನಾಯಿತಿ ನೀಡಲಾಗಿದೆ.

ಕೇವಲ ಒಂದು ಸಿನಿಮಾಗೆ ಮಾತ್ರ ಈ ರೀತಿ ವಿನಾಯಿತಿ ನೀಡಿದ್ದರ ಬಗ್ಗೆ ಖ್ಯಾತ ನಿರ್ದೇಶಕ ಮಂಸೋರೆ ಪ್ರಶ್ನೆ ಮಾಡಿದ್ದಾರೆ. ಇನ್ನುಳಿದ ಕನ್ನಡ ಸಿನಿಮಾಗಳಿಗೂ ಇದೇ ರೀತಿಯ ಬೆಂಬಲ ಬೇಕು ಎಂದು ಒತ್ತಾಯಿಸಿದ್ದಾರೆ. ಈ ಕುರಿತು ತಮ್ಮ ಅಭಿಪ್ರಾಯ ಏನು ಎಂಬುದನ್ನು ಅವರು ಬಹಿರಂಗ ಪತ್ರದಲ್ಲಿ ಬರೆದಿದ್ದಾರೆ. ಇದು ಕನ್ನಡ ಚಿತ್ರರಂಗದ ಏಳಿಗೆಗಾಗಿ ಶ್ರಮಿಸುತ್ತಿರುವ ಪ್ರತಿಯೊಬ್ಬ ನಿರ್ಮಾಪಕರ, ತಂತ್ರಜ್ಞ, ಶ್ರಮಿಕ ಹಾಗೂ ಕಲಾವಿದರ ಅನ್ನದ ಪ್ರಶ್ನೆಯಾಗಿರೋದ್ರಿಂದ ಹಾಗೂ ನಮ್ಮ ನೆಚ್ಚಿನ ಅಣ್ಣಾವ್ರು ಡಾ. ರಾಜ್​​ಕುಮಾರ್ ಅವರ ಆಶಯವೂ ಆಗಿರುವ ಕಾರಣದಿಂದಾಗಿ ಕನ್ನಡದ, ಕನ್ನಡದ ನೆಲದಲ್ಲೇ ಸಂಪೂರ್ಣವಾಗಿ ತಯಾರಾಗುವ ಪ್ರತೀ ಸಿನಿಮಾಗೂ ಈ ಹಿಂದೆ ಇದ್ದಂ ತೆ ಸಂಪೂರ್ಣ ತೆರಿಗೆ ವಿನಾಯಿತಿ ನೀಡುತ್ತೀರಾ ಎಂಬ ನಂಬಿಕೆಯಿಂದ ಈ ಪತ್ರ ಬರೆಯುತ್ತಿದ್ದೇನೆ ಎಂದು ಸಾಮಾಜಿಕ ಜಾಲತಾಣದಲ್ಲಿ ಇದನ್ನು ಶೇರ್ ಮಾಡಿದ್ದಾರೆ.

RELATED ARTICLES

Related Articles

TRENDING ARTICLES