Wednesday, January 22, 2025

ಪರಿಶಿಷ್ಟರ ಮನೆಯಲ್ಲಿ ಬೆಳಗಿನ ಉಪಹಾರ ಸೇವಿಸಿದ ಸಚಿವ ಆರ್ ಅಶೋಕ್

ತುಮಕೂರು : ತುರುವೇಕೆರೆ ತಾಲೂಕಿನ ಮಾಯಸಂದ್ರ ಗ್ರಾಮದ ಪರಿಶಿಷ್ಟ ಸಮುದಾಯಕ್ಕೆ ಸೇರಿದ ವಿನೋದ್​ ಅವರ ಮನೆಯಲ್ಲಿ ಕಂದಾಯ ಸಚಿವ ಆರ್ ಅಶೋಕ್ ಉಪಹಾರ ಸೇವಿಸಿದ್ದಾರೆ.

ಡಿಸಿ ನಡೆ ಹಳ್ಳಿ ಕಡೆ ಕಾರ್ಯಕ್ರಮದ ನಿಮಿತ್ತ ಮಾಯಸಂದ್ರದಲ್ಲಿ ವಾಸ್ತವ್ಯ ಹೂಡಿದ ಸಚಿವರು, ಬೆಳಗ್ಗೆ ವಿನೋದ್​ ಅವರ ಮನೆಗೆ ಭೇಟಿ ನೀಡಿ ಅಕ್ಕಿ ರೊಟ್ಟಿ, ಕೇಸರಿಬಾತ್ ಉಪ್ಪಿಟ್ಟು ಸೇವಿಸಿದ್ದಾರೆ.

ಇನ್ನು  ಸಾರ್ವಜನಿಕರಿಂದ ಅಹವಾಲು ಆಲಿಸಿ, ಅರ್ಜಿಗಳನ್ನು ಪರಿಶೀಲಿಸಿದರು. ತ್ವರಿತವಾಗಿ ಇತ್ಯರ್ಥಗೊಳಿಸುವಂತೆ ತಹಶೀಲ್ದಾರ್​ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು. ಸಚಿವ ಅಶೋಕ್ ಜೊತೆ ಶಾಸಕ ಮಸಾಲೆ ಜಯರಾಂ, ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ್ ಸಾಥ್ ನೀಡಿದ್ದಾರೆ.

RELATED ARTICLES

Related Articles

TRENDING ARTICLES