Friday, September 20, 2024

ಇಂದಿನಿಂದ 5 ದಿನ ಮಳೆ ಸಾಧ್ಯತೆ: ಯೆಲ್ಲೋ ಅಲರ್ಟ್‌

ಬೆಂಗಳೂರು : ಕರಾವಳಿ ಜಿಲ್ಲೆಗಳು, ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಪ್ರದೇಶ ಸಹಿತ ರಾಜ್ಯಾದ್ಯಂತ ಜೂ. 20ರಿಂದ 24ರ ವರೆಗೆ ಉತ್ತಮ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಯೆಲ್ಲೋ ಅಲರ್ಟ್‌ ಘೋಷಿಸಿದೆ.

ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮೂರು ದಿನ ಮಳೆ ಬೀಳುವ ಸಾಧ್ಯತೆಗಳಿವೆ.

ಉತ್ತರ ಒಳನಾಡು ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಬೀದರ್‌, ವಿಜಯಪುರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಾದ ಬೆಂಗಳೂರು ನಗರ, ಗ್ರಾಮಾಂತರ, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೋಲಾರ, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳಲ್ಲಿ 5 ದಿನ ಮಳೆಯ ಬೀಳುವ ಸಾಧ್ಯತೆಗಳಿವೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದ್ದಾರೆ.

RELATED ARTICLES

Related Articles

TRENDING ARTICLES