Tuesday, January 21, 2025

ಮೆದುಳು ಸಂಶೋಧನಾ ಕೇಂದ್ರ ಉದ್ಟಾಟಿಸಿದ ನರೇಂದ್ರ ಮೋದಿ

ಬೆಂಗಳೂರು : ಎರಡು ದಿನಗಳ ರಾಜ್ಯ ಪ್ರವಾಸಕ್ಕಾಗಿ ಬೆಂಗಳೂರಿನ ಯಲಹಂಕ ಏರ್​ ಬೇಸ್​ಗೆ ವಾಯುಪಡೆಯ ವಿಷೇಶ ವಿಮಾನದಲ್ಲಿ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ರಾಜ್ಯಪಾಲ ಥಾವರ್​ ಚಂದ್​ ಗೆಹಲೋಟ್​ ಸಿಎಂ ಬೊಮ್ಮಾಯಿ ಸೇರಿ ಗಣ್ಯರು ಸ್ವಾಗತಿಸಿದರು.

ಭಾರತೀಯ ವಿಜ್ಞಾನ ಸಂಸ್ಧೆಯಲ್ಲಿ 280 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಿಸಿರುವ ಮೆದುಳು ಸಂಶೋಧನಾ ಕೇಂದ್ರವನ್ನು ಪ್ರಧಾನಿ ನರೇಂದ್ರ ಮೋದಿ ಲೋಕಾರ್ಪಣೆಗೊಳಿಸಿದರು. ಹಾಗೂ 425 ಕೋಟಿ ರೂಗಳ ನಿರ್ಮಾಣವಾಗಲಿರುವ ಬಾಗ್ಚಿ-ಪಾರ್ಥಸಾರಥಿ ಆಸ್ಪತ್ರೆಗೆ ಶಂಕುಸ್ಧಾಪನೆ ನೆರವೇರಿಸಿದರು. ಎರಡು ದಿನಗಳ ಕಾಲ ಬೆಂಗಳೂರು ಮತ್ತು ಮೈಸೂರಿನಲ್ಲಿ ನಡೆಯುವ ಹಲವು ಕಾರ್ಯಕ್ರಮಗಳಲ್ಲಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ.

RELATED ARTICLES

Related Articles

TRENDING ARTICLES