Thursday, January 23, 2025

ಸಿದ್ದುಗೆ ಹುಚ್ಚು ಬಿಡಿಸಲು ಪ್ರಪಂಚದಲ್ಲೇ ಔಷಧಿ ಇಲ್ಲ: ಕೆ.ಎಸ್​​​​.ಈಶ್ವರಪ್ಪ

ಶಿವಮೊಗ್ಗ: ವಿಪಕ್ಷ ನಾಯಕ ಸಿದ್ದರಾಮಯ್ಯನಿಗೆ ಹಿಡಿದಿರುವ ಹುಚ್ಚು ಬಿಡಿಸಲು ಈ ಪ್ರಪಂಚದಲ್ಲೇ ಯಾವುದೇ ಔಷಧಿ ಇಲ್ಲ ಎಂದು ಶಿವಮೊಗ್ಗದಲ್ಲಿ ಕೆ.ಎಸ್​​​​.ಈಶ್ವರಪ್ಪ ಹರಿಹಾಯ್ದಿದ್ದಾರೆ.

ರಾಜ್ಯಕ್ಕೆ ಪ್ರಧಾನಿ ಮೋದಿ ಭೇಟಿಯನ್ನು ಸಿದ್ದರಾಮಯ್ಯ ಟೀಕಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯನಿಗೆ ಹಿಡಿದಿರುವ ಹುಚ್ಚು ಬಿಡಿಸಲು ಈ ಪ್ರಪಂಚದಲ್ಲೇ ಯಾವುದೇ ಔಷಧಿ ಇಲ್ಲ. ಎಂತಹ  ಸಂದರ್ಭದಲ್ಲಿ ಮೋದಿ ಇಡೀ ದೇಶಕ್ಕೆ ಮಾಡಿರುವ ಸೇವೆ ಮೆಚ್ಚಿಕೊಳ್ಳಬೇಕು. ಪ್ರತಿಯೊಬ್ಬ ವ್ಯಕ್ತಿಗೂ ಉಚಿತ ವ್ಯಾಕ್ಸಿನ್ ಕೊಟ್ಟಿದ್ದು ಮೋದಿ. ಇದನ್ನು ಬೇರೆ ದೇಶದವರೇ ಮೆಚ್ಚಿಕೊಂಡಿದ್ದಾರೆ. ಆದರೆ ಅವರು ಟೀಕೆ ಮಾಡಲು ಬೆಲೆ ಇಲ್ಲ. ಟೀಕೆ ಮಾಡುವುದೇ ಇವರ ಕೆಲಸವಾಗಿದೆ ಎಂದರು.

ಕೊವಿಡ್ ಸಂದರ್ಭದಲ್ಲಿ ಬಡವರಿಗೆ ಎಷ್ಟೆಷ್ಟು ಕೆಜಿ ಅಕ್ಕಿ ಕೊಟ್ಟಿದೆ ಎಂದು ಸಿದ್ದರಾಮಯ್ಯಗೆ ನೆನಪಿಲ್ಲವಾ..? ಜನರೇ ಕಾಂಗ್ರೆಸ್​​​​ಗೆ ಉತ್ತರ ಕೊಟ್ಟಿದ್ದಾರೆ.ಟೀಕೆ ಮಾಡುವ ಸಲುವಾಗಿಯೇ ಟೀಕೆ ಮಾಡಿದರೆ ನಮ್ಮ‌ ದೇಶದಲ್ಲಿ ಅದಕ್ಕೆ ಔಷಧಿ ಇಲ್ಲ ಎಂದು ಮಾಜಿ ಸಚಿವ ಈಶ್ವರಪ್ಪ ಕಿಡಿಕಾರಿದ್ದಾರೆ.

RELATED ARTICLES

Related Articles

TRENDING ARTICLES