ಮೈಸೂರು: ಪ್ರಧಾನಿ ನರೇಂದ್ರ ಮೋದಿ ಅವರ ಎರಡು ದಿನಗಳ ಪ್ರವಾಸಕ್ಕೆ ಖರ್ಚಾಗಿದ್ದು 25 ಕೋಟಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಸ್ಪಷ್ಟನೆ ನೀಡಿದ್ದಾರೆ.
ಇಂದು ಮೈಸೂರಿನ ಸರ್ಕಾರಿ ಅಥಿತಿ ಗೃಹದಲ್ಲಿ ಮೋದಿ ಪ್ರವಾಸ ಯಶಸ್ವಿಯಾಗಿದ್ದಕ್ಕೆ ಕೃತಜ್ಞತೆ ಸಲ್ಲಿಸಲು ಸುದ್ದಿಗೋಷ್ಟಿ ಏರ್ಪಡಿಸಿ ಮಾತನಾಡಿದ ಅವರು ಮೋದಿ ಅವರು ಕೈಗೊಂಡ ಎರಡು ದಿನಗಳ ಮೈಸೂರು ಪ್ರವಾಸದ ಖರ್ಚು 25ಕೋಟಿ ಆಗಿದೆ ಎಂದು ತಿಳಿಸಿದರು. ಅಲ್ಲದೇ ಮೈಸೂರು ಪ್ರವಾಸ ಅತ್ಯಂತ ಯಶಸ್ವಿಯಾಗಿದೆ ಹಾಗೂ ಯೋಗ ಕಾರ್ಯಕ್ರಮ ಯಶಸ್ವಿಯಾಗಿದೆ. ಜನಪ್ರತಿನಿಧಿಗಳು, ಪೊಲೀಸ್ ಇಲಾಖೆ, ಪಾಲಿಕೆ ಸಿಬ್ಬಂದಿ, ಜಿಲ್ಲಾಡಳಿತಕ್ಕೆ ಕೃತಜ್ಞತೆ ಸಲ್ಲಿಸುತ್ತೇನೆ, ವಿಶೇಷವಾಗಿ ಮೈಸೂರಿನ ಜನತೆಗೆ ಅಭಿನಂದನೆ ಸಲ್ಲಿಸಬೇಕು, ಭದ್ರತೆಯ ದೃಷ್ಟಿಯಿಂದ ರಸ್ತೆಗಳನ್ನು ಕೆಲವೆಡೆ ಬಂದ್ ಮಾಡಲಾಗಿತ್ತು. ಈ ನಡುವೆಯೂ ಮೈಸೂರಿನ ಜನತೆ ಸಹಕಾರ ನೀಡಿದ್ದಾರೆ. ಮುಖ್ಯಮಂತ್ರಿಗಳಿಂದಲೂ ಎಲ್ಲಾ ರೀತಿಯ ಸಹಕಾರ ದೊರೆತಿದೆ. ಒಟ್ಟಾರೆ ಕಾರ್ಯಕ್ರಮವು ಸುಮಾರು 25 ಕೋಟಿ ರೂಪಾಯಿ ವೆಚ್ಚದಲ್ಲಿ ಜರುಗಿದೆ ಎಂದು ಎಸ್. ಟಿ ಸೋಮಶೇಖರ್ ಮಾಹಿತಿ ನೀಡಿದ್ದಾರೆ
ಇನ್ನು ಪ್ರಧಾನಿಯವರು ಮುಖ್ಯಮಂತ್ರಿ ಬೊಮ್ಮಾಯಿ ಅವರ ಬಳಿ ಪದೇ ಪದೇ ಕರ್ನಾಟಕಕ್ಕೆ ಬರಬೇಕು ಎಂದು ನನಗೆ ಅನಿಸಿದೆ ಎಂದು ತಿಳಿಸಿದ್ದಾರೆ ಎಂದರು.
ಇನ್ನು ಸುದ್ದಿಗೋಷ್ಠಿಯಲ್ಲಿ ಸಂಸದ ಪ್ರತಾಪ್ ಸಿಂಹ, ಶಾಸಕದಾರ ಎಸ್.ಎ.ರಾಮದಾಸ್,ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ,ಪೊಲೀಸ್ ಆಯುಕ್ತ ಚಂದ್ರಗುಪ್ತ ಸೇರಿ ಹಲವರು ಭಾಗಿಯಾಗಿದ್ದರು.
ಇನ್ನು ಇದೇ ವೇಳೆ ಆಷಾಢ ಮಾಸದಲ್ಲಿ ಚಾಮುಂಡಿ ಬೆಟ್ಟದಲ್ಲಿ ವಿಶೇಷ ಪೂಜೆ ಹಿನ್ನಲೆ ಬೆಟ್ಟಕ್ಕೆ ಬರುವ ಭಕ್ತರಿಗೆ ಎರಡು ಡೋಸ್ ಕಡ್ಡಾಯವಾಗಿಬೇಕು ಅಥವಾ ಎರಡು ಡೋಸ್ ಲಸಿಕೆ ಪಡೆಯದಿದ್ದರೂ ನೆಗೆಟಿವ್ ರಿಪೋರ್ಟ್ ಕಡ್ಡಾಯ ಎಂದು ತಿಳಿಸಿದರು.