Sunday, January 19, 2025

ಅಪರಿಚಿತ ವಾಹನ ಡಿಕ್ಕಿ ಜಿಂಕೆ ಸಾವು

ಮಂಡ್ಯ : ಹೆದ್ದಾರಿ ದಾಟುತ್ತಿದ್ದ ಜಿಂಕೆಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಮೃತಪಟ್ಟಿರುವ ಘಟನೆ ನಿಡಘಟ್ಟ ತಾಲೂಕಿನ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಜರುಗಿದೆ.

ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ, ಕೊಂಬಿನಕಲ್ಲು ಅರಣ್ಯಧಾಮದಿಂದ ಆಹಾರ ಅರಸಿ ವಲಸೆ ಬಂದಿದ್ದ ಜಿಂಕೆ ದಾರಿತಪ್ಪಿತ್ತು. ಹೆದ್ದಾರಿ ದಾಟುತ್ತಿದ್ದಾಗ ಅಪರಿಚಿತ ವಾಹನ ಜಿಂಕೆಗೆ ಡಿಕ್ಕಿ ಹೊಡೆದಿದೆ. ಮಂಗಳವಾರ ಮಧ್ಯಾಹ್ನ 12.15ರ ಸುಮಾರಿಗೆ ಹೆದ್ದಾರಿ ದಾಟುತ್ತಿದ್ದಾಗ ಅಪರಿಚಿತ ವಾಹನ ಜಿಂಕೆಗೆ ಡಿಕ್ಕಿ ಹೊಡೆದಿದೆ.

ಈ ಮಾರ್ಗದಲ್ಲಿ ಬರುತ್ತಿದ್ದ ವಾಹನ ಸವಾರರು ಜಿಂಕೆಯನ್ನು ರಕ್ಷಣೆ ಮಾಡಿ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಅರಣ್ಯ ಇಲಾಖೆ ಅಧಿಕಾರಿಗಳು ಗಾಯಗೊಂಡ ಜಿಂಕೆಯನ್ನು ಮದ್ದೂರು ಪಶು ವೈದ್ಯ ಆಸ್ಪತ್ರೆಗೆ ತಂದು ಪ್ರಥಮ ಚಿಕಿತ್ಸೆ ನೀಡಿ, ನಂತರ ವೈದ್ಯರ ಸಲಹೆ ಮೇರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಮಂಡ್ಯ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದೆ.

RELATED ARTICLES

Related Articles

TRENDING ARTICLES