Monday, December 23, 2024

ಮಾನ್ಯ ವಸತಿ ಸಚಿವರಿಂದ “ವೆಸ್ಟ್ ಆಫ್ ಕಾರ್ಡ್ ರಸ್ತೆ ಮೇಲುಸೇತುವೆ” ಕಾಮಗಾರಿ ಪರಿಶೀಲನೆ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಗೋವಿಂದರಾಜ ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ “ವೆಸ್ಟ್ ಆಫ್ ಕಾರ್ಡ್ ರಸ್ತೆ ಮೇಲುಸೇತುವೆ ” ಕಾಮಗಾರಿಯ ಸ್ಥಳವನ್ನು ಮಾನ್ಯ ವಸತಿ ಸಚಿವರಾದ ಶ್ರೀ ವಿ.ಸೋಮಣ್ಣ ರವರು ಪರಿಶೀಲನೆ ನಡೆಸಿದರು.
ನಗರದ ವೆಸ್ಟ್ ಆಫ್ ಕಾರ್ಡ್ ರಸ್ತೆಯಲ್ಲಿ ಸಿಗ್ನಲ್ ಮುಕ್ತ ಕಾರಿಡಾರ್ ನಿರ್ಮಿಸುವ ಸಲುವಾಗಿ ಮಂಜುನಾಥನಗರದ ಬಳಿ ಮೇಲುಸೇತುವೆ, ಶಿವನಗರ 1 ಮತ್ತು 8ನೇ ಮುಖ್ಯ ರಸ್ತೆಯ ಕೂಡು ಸ್ಥಳದಲ್ಲಿ ಕೆಳಸೇತುವೆ ಹಾಗು ಬಸವೇಶ್ವರ ನಗರ ವೃತ್ತದ ಏಕಮುಖ ಸಂಚಾರದ ಬಳಿ ಮೇಲುಸೇತುವೆಯ ಗ್ರೇಡ್ ಸೆಪರೇಟರ್ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿತ್ತು.

ಅದರಂತೆ, ಮಂಜುನಾಥನಗರ ಬಳಿ 18.18 ಕೋಟಿ ರೂ. ವೆಚ್ಚದಲ್ಲಿ 270.62 ಮೀ ಉದ್ದದ ಮೇಲುಸೇತುವೆಯನ್ನು ದಿನಾಂಕ: 27.08.2018 ರಂದು ಲೋಕಾರ್ಪಣೆಗೊಳಿಸಿ ಸಾರ್ವಜನಿಕರ ಉಪಯೋಗಕ್ಕೆ ಅನುವುಮಾಡಲಾಗಿರುತ್ತದೆ. ಶಿವನಗರ 1 ಮತ್ತು 8ನೇ ಮುಖ್ಯ ರಸ್ತೆಯ ಕೂಡು ಸ್ಥಳದಲ್ಲಿ ಕೆಳಸೇತುವೆಯ ಬದಲಾಗಿ 71.98 ಕೋಟಿ ರೂ. ವೆಚ್ಚದಲ್ಲಿ 655 ಮೀಟರ್ ಉದ್ದದ ಮೇಲುಸೇತುವೆ ಕಾಂಗಾರಿಯನ್ನು ಕೈಗೆತ್ತಿಕೊಂಡು ದಿನಾಂಕ: 04.10.2021 ರಂದು ಲೋಕಾರ್ಪಣೆಗೊಳಿಸಿ ಸಾರ್ವಜನಿಕರ ಉಪಯೋಗಕ್ಕೆ ಅನುವುಮಾಡಲಾಗಿರುತ್ತದೆ.

ಇನ್ನು ಶಿವನಗರ ನಂತರದ ಜಂಕ್ಷನ್‌ಗಳಾದ ಬಸವೇಶ್ವರ ನಗರ ಜಂಕ್ಷನ್ ಮತ್ತು 72ನೇ ಅಡ್ಡ ರಸ್ತೆಯ ಜಂಕ್ಷನ್ ಬಳಿ ಮೇಲುಸೇತುವೆ ನಿರ್ಮಾಣದ ಕಾಮಗಾರಿಯು ಪ್ರಗತಿಯಲ್ಲಿರುತ್ತದೆ. ಬಸವೇಶ್ವರ ಜಂಕ್ಷನ್ ಬಳಿ ಹೆಚ್ಚುವರಿ ಏಕಮುಖ ಸಂಚಾರದ ಮೇಲುಸೇತುವೆಯನ್ನು 20.925 ಕೋಟಿ ರೂ. ವೆಚ್ಚದಲ್ಲಿ ಒಟ್ಟು 467.35 ಮೀ ಉದ್ದ ನಿರ್ಮಾಣಕ್ಕೆ ಸರ್ಕಾರದಿಂದ ಅನುಮೋದನೆ ದೊರಕಿದ್ದು, ಗುತ್ತಿಗೆದಾರರಿಗೆ ಕಾರ್ಯಾದೇಶ ನೀಡಿ ಆಗಸ್ಟ್ ತಿಂಗಳೊಳಗಾಗಿ ಕಾಮಗಾರಿಯನ್ನು ಪೂರ್ಣಗೊಳಿಸಲು ಮಾನ್ಯ ವಸತಿ ಸಚಿವರು ಅಧಿಕಾರಿಗಳಿಗೆ ಆದೇಶಿಸಿರುತ್ತಾರೆ.

ಪರಿಶೀಲನೆಯ ವೇಳೆ ವಲಯ ಆಯುಕ್ತರಾದ ಡಾ. ದೀಪಕ್, ವಲಯ ಜಂಟಿ ಆಯುಕ್ತರಾದ ಶ್ರೀನಿವಾಸ್, ಮುಖ್ಯ ಅಭಿಯಂತರರಾದ ದೊಡ್ಡಯ್ಯ, ಲೋಕೇಶ್ ಹಾಗೂ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

RELATED ARTICLES

Related Articles

TRENDING ARTICLES