Monday, December 23, 2024

ಡಬಲ್ ಇಂಜಿನ್ ಸರ್ಕಾರದ ಮೇಲೆ ಸಿದ್ದರಾಮಯ್ಯ ಗಂಭೀರ ಆರೋಪ

ಮೈಸೂರು : ಡಬಲ್ ಇಂಜಿನ್ ಸರ್ಕಾರ ಏನು ಮಾಡಿದೆ? ಎಂದು ಮೈಸೂರಿನಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಆಡಳಿತ ಪಕ್ಷದ ವಿರುದ್ಧ ಕಿಡಿಕಾಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ರಾಜ್ಯ ಭೇಟಿ ವಿಚಾರ ಹಿನ್ನೆಲೆ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೋದಿ ಅವರು ರಾಜ್ಯಕ್ಕೆ ಬಂದಾಗ ಜನರ ಮುಂದೆ ಕೊಟ್ಟ ಹೇಳಿದ ಸರ್ಕಾರದ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.

ಹಾಗೂ ಡಬಲ್​​ ಇಂಜಿನ್​​ ಸರ್ಕಾರ ರಾಜ್ಯಕ್ಕೆ ಮಾಡಿರುವ ಅಭಿವೃದ್ಧಿ ಕಾರ್ಯದ ಪಟ್ಟಿ ಕೊಡಿ. ಸುಮ್ಮನೇ ಸುಳ್ಳು ಹೇಳಿ ಮೋದಿ ಹೋಗಿದ್ದಾರೆ ಎಂದು ಹರಿಹಾಯ್ದಿದ್ದಾರೆ.

ಇನ್ನು ಇದೇ ವೇಳೆ ರಾಜ್ಯ ಸರ್ಕಾರ ಪ್ರಧಾನಿಯವರಿಗೆ ರಾಜ್ಯದ ಬೇಡಿಕೆ ಬಗ್ಗೆ ಮನವಿ ನೀಡದ ವಿಚಾರಕ್ಕೆ ಪ್ರತಿಕ್ರಿಯಿಸಿ, ಮೋದಿ ಏನು ಮಾಡುವುದಿಲ್ಲ ಅನ್ನೋದು ರಾಜ್ಯದ ನಾಯಕರಿಗೆ ಗೊತ್ತಿದೆ. ಅದಕ್ಕೆ ಅವರು ಯಾವುದೇ ಮನವಿ ನೀಡಿಲ್ಲ ಎಂದು ವ್ಯಂಗ್ಯವಾಡಿದ್ದಾರೆ.

ಮಹರಾಷ್ಟ್ರದ ಸರ್ಕಾರ ಪತನ ವಿಚಾರಕ್ಕೆ ಪ್ರತಿಕ್ರಿಯಿಸಿ, ಬಿಜೆಪಿ ಭ್ರಷ್ಟಾಚಾರದ ಹಣದಲ್ಲಿ ಆಪರೇಷನ್ ಕಮಲಕ್ಕೆ ಮುಂದಾಗಿದೆ ಎಂದು ಗಂಭೀರ ಆರೋಪ ಮಾಡಿದರು. ಅಲ್ಲದೇ ಇದು ಪ್ರಜಾಪ್ರಭುತ್ವಕ್ಕೆ ಮಾರಕವಾಗಿದೆ. ಕರ್ನಾಟಕದ ಬಿಜೆಪಿಯ ಚಾಳಿ ದೇಶಕ್ಕೆ ಹಬ್ಬಿಸಿದ್ದಾರೆ. ಇದನ್ನು ತಡೆಗಟ್ಟಲು ಪಕ್ಷಾಂತರ ಕಾಯ್ದೆ ತಿದ್ದುಪಡಿ ಆಗಬೇಕು ಎಂದರು.

ಇನ್ನು ಒಂದು ಪಕ್ಷದಿಂದ ಆಯ್ಕೆಯಾದವನು ಬೇರೆ ಸ್ಥಾನಕ್ಕೆ ಹೋಗದಂತೆ ತಡೆಯಬೇಕು. ಹೋದರೆ 10 ವರ್ಷ ಆತ ಚುನಾವಣೆಗೆ ನಿಲ್ಲದಂತೆ ಆದೇಶ ಮಾಡಬೇಕು. ಪ್ರಜಾಪ್ರಭುತ್ವದ ಉಳಿವಿಗೆ ಇದರ ಅವಶ್ಯಕತೆ ಇದೆ. ಆಪರೇಷನ್ ಕಮಲ ಹುಟ್ಟು ಹಾಕಿದ್ದೇ ಬಿಜೆಪಿಯವರು. 2008ರಲ್ಲಿ ಯಡಿಯೂರಪ್ಪ ಮೊದಲ ಆಪರೇಷನ್ ಕಮಲ ಮಾಡಿದರು. ಎಲ್ಲೂ ಅವರಿಗೆ ಬಹುಮತ ಬಂದಿಲ್ಲ, ಎಲ್ಲಾ ಕಡೆ ಹಣ ಕೊಟ್ಟಿ ಶಾಸಕರನ್ನು ಖರೀದಿಸಿ ಸರ್ಕಾರ ಮಾಡಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು.

RELATED ARTICLES

Related Articles

TRENDING ARTICLES