Sunday, December 22, 2024

ಸಾಲದ ಸುಳಿಯಲ್ಲಿ ಸಿಲುಕಿರುವ ಬಿಎಂಟಿಸಿ

ಬೆಂಗಳೂರು : ಸಾಲದ ಸುಳಿಯಲ್ಲಿ ಸಿಲುಕಿರುವ ಬಿಎಂಟಿಸಿ ಡಿಪೊಗಳಿಗೆ ಇಂಧನ ಪೂರೈಕೆಯಾಗದೆ, ಖಾಸಗಿ ಪೆಟ್ರೋಲ್ ಬಂಕ್​ಗಳ ಬಳಿ ಸಾಲುಗಟ್ಟಿ ನಿಲ್ಲುವಂತಾಗಿದೆ.

ಡಿಪೊಗಳಿಗೆ ಇಂಧನ ಪೂರೈಕೆಯಾಗದೆ, ಖಾಸಗಿ ಪೆಟ್ರೋಲ್ ಬಂಕ್​ಗಳ ಬಳಿ ಸಾಲುಗಟ್ಟಿ ನಿಲ್ಲುವಂತಾಗಿದೆ. HPCL ಇಂಧನ ಖರೀದಿಸುತ್ತಿದ್ದ ಬಿಎಂಟಿಸಿ, ₹70 ಕೋಟಿ ಬಾಕಿ ಉಳಿಸಿಕೊಂಡಿದೆ. ಸಗಟು ಖರೀದಿ ದರ ಪ್ರತಿ ಲೀಟರ್ ಡೀಸೆಲ್​ಗೆ ₹119 ಆಗಿದೆ. ಚಿಲ್ಲರೆ ವ್ಯಾಪಾರದಲ್ಲಿ ಡೀಸೆಲ್ ದರ ಲೀಟರ್ಗೆ ₹87 ಇದೆ. ಇದರಿಂದಾಗಿ ಬಿಎಂಟಿಸಿ, ಚಿಲ್ಲರೆ ವ್ಯಾಪಾರಿಗಳಿಂದಲೇ ಡೀಸೆಲ್ ಖರೀದಿಸಿ ಬಸ್​​ಗಳ ಸಂಚಾರವನ್ನು ಸುಗಮ ಮಾಡಿಕೊಂಡಿತ್ತು.

ಅದಲ್ಲದೇ, ಚಿಲ್ಲರೆ ವ್ಯಾಪಾರಿಗಳೇ ಟ್ಯಾಂಕರ್ಗಳಲ್ಲಿ ಪ್ರತಿದಿನ ಸಂಸ್ಥೆಗಳ ಡಿಪೊಗಳಲ್ಲಿರುವ ಬಂಕ್​ಗಳಿಗೆ ಪೂರೈಕೆ ಮಾಡುತ್ತಿದ್ದರು. ಅಂದಿನ ಡೀಸೆಲ್ ಮೊತ್ತವನ್ನು ಅಂದೇ ಪಾವತಿಸಿ ಬಿಎಂಟಿಸಿ ಕೈತೊಳೆದುಕೊಳ್ಳುತ್ತಿತ್ತು. ಈ ಪ್ರಕ್ರಿಯೆ ಎರಡು ತಿಂಗಳಿಂದ ನಡೆದುಕೊಂಡು ಬಂದಿದೆ. ಆದರೆ ಈಗ ಎರಡು ದಿನಗಳಿಂದ ಬಂಕ್​ಗಳಿಗೆ ಪೂರೈಕೆ ಮಾಡುವುದನ್ನು ವ್ಯಾಪಾರಿಗಳು ಸ್ಥಗಿತಗೊಳಿಸಿದ್ದಾರೆ.

ಇನ್ನು, ಡಿಪೊಗಳ ಬಂಕ್​ಗಳಲ್ಲಿ ಡೀಸೆಲ್ ಖಾಲಿಯಾಗಿ ಬಸ್​ಗಳು ಡಿಪೋ ಸಮೀಪದ ಪೆಟ್ರೋಲ್ ಬಂಕ್​ಗಳಲ್ಲಿ ಡೀಸೆಲ್​ಗಾಗಿ ಸಾಲುಗಟ್ಟಿ ನಿಲ್ಲುತ್ತಿವೆ. ಇದರಿಂದಾಗಿ ಬಂಕ್​ಗಳ ಮುಂದೆ ಸಂಚಾರ ದಟ್ಟಣೆ ಉಂಟಾಗುತ್ತಿದೆ. ಪೀಣ್ಯದಲ್ಲಿ ಶನಿವಾರ ಬಹುತೇಕ ಪೆಟ್ರೋಲ್ ಬಂಕ್​ಗಳಲ್ಲಿ ಬಸ್​ಗಳ ಸಾಲು ಇತ್ತು.

RELATED ARTICLES

Related Articles

TRENDING ARTICLES