Wednesday, January 22, 2025

ಇಂದಿನಿಂದ ಭಾರತ-ಐರ್ಲೆಂಡ್ ಟಿ-20 ಫೈಟ್

ಮುಂಬೈ : ಮುಂಬರುವ ಟಿ-20 ವಿಶ್ವಕಪ್‌ಗೆ ಬಲಿಷ್ಠ ತಂಡವನ್ನು ಕಟ್ಟಲು ಎದುರು ನೋಡುತ್ತಿರುವ ಟೀಂ ಇಂಡಿಯಾ ಐರ್ಲೆಂಡ್‌ ವಿರುದ್ಧದ ಟಿ20 ಸರಣಿಗೆ ಸಜ್ಜಾಗಿದ್ದು, ಇಂದು 2 ಪಂದ್ಯಗಳ ಸರಣಿಯ ಮೊದಲ ಪಂದ್ಯ ನಡೆಯಲಿದೆ.

ಪಂದ್ಯಕ್ಕೆ ಡಬ್ಲಿನ್‌ ಕ್ರೀಡಾಂಗಣ ಆತಿಥ್ಯ ವಹಿಸಲಿದ್ದು, ಹಾರ್ದಿಕ್ ಪಾಂಡ್ಯ ನೇತೃತ್ವದ ಯುವ ಆಟಗಾರರನ್ನೊಳಗೊಂಡ ತಂಡವು ಐರ್ಲೆಂಡ್ ಎದುರು ಸವಾರಿ ಮಾಡಲು ಎದುರು ನೋಡುತ್ತಿದೆ. ಐಪಿಎಲ್‌ನಲ್ಲಿ ಮಿಂಚಿದ್ದ ಆಟಗಾರರು ಇದೀಗ ರಾಷ್ಟ್ರೀಯ ತಂಡದಲ್ಲಿ ತಮ್ಮ ಸ್ಥಾನವನ್ನು ಮತ್ತಷ್ಟು ಭದ್ರಪಡಿಸಿಕೊಳ್ಳಲು ಈ ಸರಣಿ ಮತ್ತೊಂದು ಸುವರ್ಣಾವಕಾಶವನ್ನು ಒದಗಿಸಿಕೊಟ್ಟಿದೆ.

ಹೊಸ ಕೋಚ್‌ ಅಡಿಯಲ್ಲಿ ಆಡುವ ತಂಡದಲ್ಲಿ ಹಿರಿಯ ಆಟಗಾರರೂ ಲಭ್ಯವಿಲ್ಲ. IPLನಲ್ಲಿ ಚೊಚ್ಚಲ ಪ್ರಯತ್ನದಲ್ಲೇ ಗುಜರಾತ್‌ ತಂಡವನ್ನು ಚಾಂಪಿಯನ್‌ ಪಟ್ಟಕ್ಕೇರಿಸಿದ್ದ ಹಾರ್ದಿಕ್‌ ಮೊದಲ ಬಾರಿ ರಾಷ್ಟ್ರೀಯ ತಂಡವನ್ನು ಮುನ್ನಡೆಸಲಿದ್ದು, ನಾಯಕತ್ವದ ಅಗ್ನಿಪರೀಕ್ಷೆಗೆ ಒಳಗಾಗಲಿದ್ದಾರೆ. ರಾಹುಲ್‌ ದ್ರಾವಿಡ್‌ ಅನುಪಸ್ಥಿತಿಯಲ್ಲಿ NCI ಮುಖ್ಯಸ್ಥ ವಿವಿಎಸ್‌ ಲಕ್ಷ್ಮಣ್ ತಂಡಕ್ಕೆ ಕೋಚ್‌ ಆಗಿ ಕಾರ್ಯ ನಿರ್ವಹಿಸಲಿದ್ದು, ಸರಣಿ ಗೆಲುವಿನ ಕಾತರದಲ್ಲಿದ್ದಾರೆ.

RELATED ARTICLES

Related Articles

TRENDING ARTICLES