Wednesday, January 22, 2025

ದಲಿತ ಸಿಎಂ ವಿಚಾರ : ಡಿಕೆಶಿಗೆ ತಿರುಗೇಟು ನೀಡಿದ ಬಿಜೆಪಿ

ಬೆಂಗಳೂರು : ದಲಿತರು ಯಾಕೆ ಸಿಎಂ ಆಗಬಾರದು ಎಂಬ ಹೇಳಿಕೆ ನೀಡಿದ್ದ ಡಿ‌.ಕೆ ಶಿವಕುಮಾರ್ ಅವರಿಗೆ ಬಿಜೆಪಿ ಟ್ವೀಟ್ ಮೂಲಕ ವಾಗ್ದಾಳಿ ನಡೆಸಿದ್ದಾರೆ.

ಇಂದು ತಮ್ಮ ಅಧಿಕೃತ ಖಾತೆಯಲ್ಲಿ ಟ್ವೀಟ್ ಮಾಡಿರುವ ಬಿಜೆಪಿ ಡಿಕೆಶಿಯವರೇ ದಲಿತರು ಯಾಕೆ ಮುಖ್ಯಮಂತ್ರಿ ಆಗಬಾರದು..? ಆದರೆ ಈ ನೀವು ಈ ಪ್ರಶ್ನೆ ಕೇಳಲು ಅರ್ಹರಲ್ಲ, ಏಕೆಂದರೆ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಮುನ್ನೆಲೆಗೆ ಬಂದ ದಲಿತ ಸಿಎಂ ವಿಚಾರದಲ್ಲಿ ಸರ್ವಾಂಗವನ್ನೂ ಸ್ತಬ್ಧಗೊಳಿಸಿಕೊಂಡಿದ್ದಿರಲ್ಲವೇ..? ದಲಿತವಿರೋಧಿಕಾಂಗ್ರೆಸ್‌ ಎಂದು ಹ್ಯಾಷ್ ಟ್ಯಾಗ್ ಮೂಲಕ ಬಿಜೆಪಿ ಟ್ವೀಟ್ ಮಾಡಿ ಕಿಡಿಕಾಡಿದ್ದಾರೆ.

ದಲಿತ‌ ಮುಖ್ಯಮಂತ್ರಿ ವಾದ ತೀವ್ರಗೊಂಡಿದ್ದ ಸಂದರ್ಭದಲ್ಲಿ ಶಿವಕುಮಾರ್ ಅವರು ಸೌಜನ್ಯಕ್ಕೂ ಬಾಯಿ ತೆರೆಯಲಿಲ್ಲ. ಸಂಪುಟದಿಂದ ಸಿದ್ದರಾಮಯ್ಯ‌‌ ನಿಮ್ಮನ್ನು‌ ಕಿತ್ತೊಗೆಯುತ್ತಿದ್ದರು ಎಂಬ ಭಯ ಕಾಡುತ್ತಿತ್ತೇ ಡಿಕೆಶಿ..? ಮೂಲ‌‌ ಕಾಂಗ್ರೆಸ್ಸಿಗರೇ ಎತ್ತಿದ್ದ ಈ ವಾದಕ್ಕೆ ಡಿಕೆಶಿ ಬೆಂಬಲ ನೀಡದೇ ಇದ್ದಿದ್ದೇಕೆ..? ಎಂದು ಪ್ರಶ್ನೆ ಮಾಡಿದ್ದಾರೆ.

ದಲಿತರು ಮುಖ್ಯಮಂತ್ರಿ ಆದರೆ ತಪ್ಪೇನು ಎಂದು ಅಕಾಲದಲ್ಲಿ ವಾದ ಮಾಡುವ ಕಾಂಗ್ರೆಸ್‌ ನಾಯಕರಿಗೆ, ಅಧಿಕಾರದಲ್ಲಿ ಇದ್ದಾಗ ದಲಿತರ ಮೇಲಿನ ಕಾಳಜಿ‌ ಮರೆತು ಹೋಗುತ್ತದೆl. ಇದಕ್ಕೆ ಸಿದ್ದರಾಮಯ್ಯನವರೂ ಹೊರತಲ್ಲ, ಡಿಕೆಶಿಯೂ ಅಪವಾದವಲ್ಲ. ಅಧಿಕಾರಕ್ಕಾಗಿ ಓಲೈಕೆ ರಾಗವಷ್ಟೇ ಎಂದಿದ್ದಾರೆ.

ಇನ್ನು ಡಿಕೆಶಿ ಅವರೇ, ನಿಮಗೆ ನಿಜಕ್ಕೂ‌ ದಲಿತರ ಮೇಲೆ ಕಾಳಜಿಯಿದ್ದರೆ, ಮುಂದೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದಲಿತರನ್ನೇ ಸಿಎಂ‌ ಮಾಡುತ್ತೇವೆ ಎಂದು ಘೋಷಿಸಿ. ಕೆಪಿಸಿಸಿ ಅಧ್ಯಕ್ಷರು ದಲಿತರನ್ನು ಸಿಎಂ ಮಾಡುವ ಬಗ್ಗೆ ಮಾತನಾಡಿದ್ದಾರೆ. ಈ ಬಗ್ಗೆ ನಿಮ್ಮ ಸಿದ್ದರಾಮಯ್ಯ ಅಭಿಪ್ರಾಯವೇನು..? ದಲಿತರನ್ನು ಸಿಎಂ ಮಾಡುವ ಬದ್ಧತೆ ನಿಜಕ್ಕೂ ಕಾಂಗ್ರೆಸ್‌ ಪಕ್ಷಕ್ಕಿದೆಯೇ? ಆಷಾಢಭೂತಿತನದ ಪ್ರದರ್ಶನವೇಕೆ ಎಂದು ಬಿಜೆಪಿ ಟ್ವೀಟ್ ಮೂಲಕವೇ ಗುಡುಗಿದ್ದಾರೆ.

RELATED ARTICLES

Related Articles

TRENDING ARTICLES