Monday, December 23, 2024

ರಾಜ್ಯದಲ್ಲಿ ಪಠ್ಯಪುಸ್ತಕ ಪರಿಷ್ಕರಣೆ ಮಾರ್ಪಾಡು..!

ಬೆಂಗಳೂರು : ರಾಜ್ಯದಲ್ಲಿ ಶುರುವಾಗಿರೋ ಪಠ್ಯಪುಸ್ತಕ ಪರಿಷ್ಕರಣೆ ವಿಚಾರ ಭಾರಿ ವಿವಾದಕ್ಕೆ ಕಾರಣವಾಗಿತ್ತು. ರಾಜ್ಯಾದ್ಯಂತ ಪ್ರತಿಭಟನೆ, ಹೋರಾಟ, ಸಭೆಗಳು ನಡೆದಿದ್ವು. ಹಲವಾರು ಚಿಂತಕರು, ಲೇಖಕರು, ಸ್ವಾಮೀಜಿಗಳು, ವಿರೋಧ ಪಕ್ಷದವರು ಸೇರಿದಂತೆ ಹಲವರು ಭಾರಿ ವಿರೋಧ ವ್ಯಕ್ತಪಡಿಸಿದ್ರು. ಇನ್ನು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ರು.. ಪಠ್ಯ ಪುಸ್ತಕ ಪರಿಷ್ಕರಣೆ ಆದಷ್ಟು ಬೇಗ ಬಗೆಹರಿಸಿ ಅಂತ ಪತ್ರದ ಮೂಲಕ ಒತ್ತಾಯಿಸಿದ್ರು. ಇದ್ರ ಬೆನ್ನಲ್ಲೇ ಸರ್ಕಾರ ಎಚ್ಚೆತ್ತುಕೊಂಡಿದೆ. ಈ ಸಂಬಂಧ ಸಿಎಂ ನೇತೃತ್ವದಲ್ಲಿ ಸಭೆ ನಡೆಸಿ, ಹಲವಾರು ವಿಚಾರಗಳ ಬಗ್ಗೆ ಚರ್ಚೆ ನಡೆಸಲಾಗಿತ್ತು.

ಇದೀಗ, ಹಲವಾರು ತಿದ್ದುಪಡಿ ಮಾಡಿದೆ ಸರ್ಕಾರ. ಹೊಸ ತಿದ್ದುಪಡಿಯಲ್ಲಿ ಯಾವ ಯಾವ ವಿಚಾರಗಳನ್ನು ತಿದ್ದುಪಡಿ ಮಾಡಲಾಗಿದೆ ಅನ್ನೊದನ್ನ ನೋಡೋದಾದ್ರೆ.

9ನೇ ತರಗತಿ ಸಮಾಜ ವಿಜ್ಞಾನದಲ್ಲಿ ‘ಸಂವಿಧಾನ ಶಿಲ್ಪಿ’ ಪದ ಸೇರ್ಪಡೆ
7ನೇ ತರಗತಿ ಸಮಾಜ ವಿಜ್ಞಾನ ಪಠ್ಯದಲ್ಲೂ ಬದಲಾವಣೆ
‘ಭಕ್ತಿ ಪಂಥ ಹಾಗೂ ಸೂಫಿ ಸಂತರು’ ಸಂಪೂರ್ಣ ಪಾಠ ಸೇರ್ಪಡೆ
7ನೇ ತರಗತಿ ಕನ್ನಡ ಪುಸ್ತಕದಲ್ಲಿ ‘ಗೊಂಬೆ ಕಲಿಸುವ ನೀತಿ’ ಪದ್ಯದ ಕೃತಿಕಾರರ ಪರಿಚಯ
ಡಾ.ಆರ್.ಎನ್.ಜಯಗೋಪಾಲ್ ಎಂದು ತಪ್ಪಾಗಿ ಮುದ್ರಣಗೊಂಡಿತ್ತು
ಮೂಲ ಕೃತಿಕಾರರಾದ ಚಿ.ಉದಯಶಂಕರ್ ಅವರ ಕವಿ ಪರಿಚಯ
6ನೇ ತರಗತಿ ಸಮಾಜ ವಿಜ್ಞಾನದಲ್ಲಿ ಸಿದ್ದಗಂಗಾ ಮಠ, ಆದಿಚುಂಚನಗಿರಿ ಮಠ ಕುರಿತ ಸೇವೆ
ಮೈಸೂರು, ಇತರ ಸಂಸ್ಥಾನಗಳು ಎಂಬ ಪಾಠದಲ್ಲಿದ್ದ ಸುರಪುರ ನಾಯಕರ ಕುರಿತ ವಿವರ
9ನೇ ತರಗತಿಯ ಸಮಾಜ ವಿಜ್ಞಾನ ಭಾಗ-1ರ ಪಠ್ಯ ಪುಸ್ತಕದಲ್ಲಿ ಸೇರ್ಪಡೆ
ಭಾರತದ ಮತ ಪರಿವರ್ತಕರು ಎಂಬ ಅಧ್ಯಾಯದಲ್ಲಿ ಬಸವಣ್ಣನವರ ಕುರಿತಾದ ವಿಷಯ ಸೇರ್ಪಡೆ
7ನೇ ತರಗತಿ ಸಮಾಜ ವಿಜ್ಞಾನದಲ್ಲಿ ಕರ್ನಾಟಕ ರಾಜ್ಯ ಏಕೀಕರಣ, ಗಡಿವಿವಾದಗಳು
ರಾಷ್ಟ್ರಕವಿ ಕುವೆಂಪು, ಹುಯಿಲಗೋಳ ನಾರಾಯಣರಾವ್‌ ಭಾವಚಿತ್ರ ಅಳವಡಿಕೆ

ಪಠ್ಯ ಪುಸ್ತಕ ಪರಿಷ್ಕರಣೆ ವಿಚಾರವಾಗಿ ರಾಜ್ಯಾದ್ಯಂತ ಭಾರಿ ವಿರೋಧ ವ್ಯಕ್ತವಾಗಿತ್ತು.. ಸದ್ಯ ಸಿಎಂ ಪಠ್ಯದಲ್ಲಿ ತಿದ್ದುಪಡಿ ಮಾಡುವ ಮೂಲಕ ಗೊಂದಲ ನಿವಾರಣೆ ಮಾಡುವ ಪ್ರಯತ್ನ ಮಾಡಿದ್ದಾರೆ.

ಸ್ವಾತಿ ಪುಲಗಂಟಿ ಮೆಟ್ರೋ ಬ್ಯೂರೋ ಬೆಂಗಳೂರು

RELATED ARTICLES

Related Articles

TRENDING ARTICLES