Monday, December 23, 2024

ಶ್ರೀಗಳಿಂದ ಮಕ್ಕಳಿಗೆ ಅಕ್ಷರಾಭ್ಯಾಸ

ತುಮಕೂರು : ಕೊರಟಗೆರೆ ಪಟ್ಟಣದಲ್ಲಿ ನೂರಕ್ಕೂ ಹೆಚ್ಚು ಮಕ್ಕಳಿಗೆ ಶ್ರೀ ಶ್ರೀ ಶ್ರೀ ವೀರಭದ್ರ ಶಿವಾಚಾರ್ಯ ಶ್ರೀಗಳಿಂದ ಅಕ್ಷರಾಭ್ಯಾಸ ಮಾಡಿಸಲಾಯಿತು.

ಕೊರಟಗೆರೆ ತಾಲೂಕಿನ ಶ್ರೀ ಕ್ಷೇತ್ರ ಸಿದ್ದರಬೆಟ್ಟದ ಬಾಳೆ ಹೊನ್ನೂರು ಖಾಸಾ ಶಾಖಾ ಮಠದ ಶ್ರೀ ಶ್ರೀ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿಗಳ ನೇತೃತ್ವದಲ್ಲಿ ಕೊರಟಗೆರೆ ಪಟ್ಟಣದಲ್ಲಿ ಆಯೋಜಿಸಿದ್ದ ಅಕ್ಷರಾಭ್ಯಾಸ ಕಾರ್ಯಕ್ರಮದಲ್ಲಿ ನೂರಕ್ಕೂ ಹೆಚ್ಚು ಎಲ್ ಕೆ ಜಿ, ಯುಕೆಜಿ, ಅಂಗನವಾಡಿ ವಿದ್ಯಾರ್ಥಿಗಳು ಪೋಷಕರೊಂದಿಗೆ ಆಗಮಿಸಿ ಅಕ್ಷರಾಭ್ಯಾಸ ಮಾಡಿಸಿದ್ದಾರೆ.

ಏಕಕಾಲಕ್ಕೆ ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ಇದೇ ಪ್ರಥಮ ಭಾರಿಗೆ ಕೊರಟಗೆರೆ ಪಟ್ಟಣದಲ್ಲಿ ಅಕ್ಷರಾಭ್ಯಾಸ ನಡೆಸಿದ್ದು, ಶ್ರೀಮಠದ ಕಾರ್ಯಕ್ಕೆ ಸಾರ್ವಜನಿಕ ವಲಯದಲ್ಲೂ ಮೆಚ್ಚುಗೆ ವ್ಯಕ್ತಪಡಿಸಲಾಯಿತು.

RELATED ARTICLES

Related Articles

TRENDING ARTICLES