Thursday, January 23, 2025

ಅಮೇರಿಕಾದಲ್ಲಿ ಭೀಕರ ರೈಲು ಅಪಘಾತ : 50 ಜನ ಸಾವು

ವಾಷಿಂಗ್ಟನ್ : ಅಮೆರಿಕದಲ್ಲಿ ಭೀಕರ ರೈಲು ಅಪಘಾತ ಸಂಭವಿಸಿದ್ದು, 50 ಕ್ಕೂ ಹೆಚ್ಚು ಪ್ರಯಾಣಿಕರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ನಡೆದಿದೆ.

ಮಿಸೌರಿಯ ಮೆಂಡನ್​​ನಲ್ಲಿ ಸೋಮವಾರ ಮಧ್ಯಾಹ್ನ ಅಮ್ಟ್ರಾಕ್ ರೈಲು ಡಂಪ್ ಟ್ರಕ್​​ಗೆ ಡಿಕ್ಕಿ ಹೊಡೆದು ಹಳಿ ತಪ್ಪಿದ ಪರಿಣಾಮ 50 ಜನ ಸಾವನ್ನಪ್ಪಿದ್ದಾರೆ. ಹಲವು ಪ್ರಯಾಣಿಕರು ಗಾಯಗೊಂಡಿದ್ದು, ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಲಾಸ್ ಏಂಜಲೀಸ್​​​ನಿಂದ ಚಿಕಾಗೋಗೆ 243 ಪ್ರಯಾಣಿಕರು ಮತ್ತು 12 ಸಿಬ್ಬಂದಿಗಳನ್ನು ಕರೆದೊಯ್ಯುತ್ತಿದ್ದ ಟ್ರೈನ್ ಅಪಘಾತ ಸಂಭವಿಸಿದೆ ಎಂದು ಅಮ್ಟ್ರಾಕ್ ಹೇಳಿಕೆಯಲ್ಲಿ ತಿಳಿಸಿದೆ. ಮೆಂಡನ್ ಕಾನ್ಸಾಸ್ ನಗರದಿಂದ ಈಶಾನ್ಯಕ್ಕೆ ಸುಮಾರು 115 ಮೈಲಿ ದೂರದಲ್ಲಿದೆ.

RELATED ARTICLES

Related Articles

TRENDING ARTICLES