Wednesday, January 22, 2025

ನನಗೆ ರಾಜಕೀಯವಾಗಿ ಶಕ್ತಿ ತುಂಬಿ : ಶಾಸಕ ಕೆ.ಎಂ.ಶಿವಲಿಂಗೇಗೌಡ

ಚಿಕ್ಕಮಗಳೂರ : ಹೇಮಾವತಿ ನದಿಯಿಂದ ಕುಡಿಯುವ ನೀರು, ಎತ್ತಿನಹೊಳೆ ಯೋಜನೆಯನ್ನು ಅರಸೀಕೆರೆ ವಿಧಾನಸಭಾ ಕ್ಷೇತ್ರಕ್ಕೆ ತಂದಿದ್ದೇನೆ ಅದಕ್ಕಾಗಿ ನನಗೆ ರಾಜಕೀಯವಾಗಿ ಶಕ್ತಿ ತುಂಬಿ ಎಂದು ಕೆ.ಎಂ.ಶಿವಲಿಂಗೇಗೌಡ ಹೇಳಿಕೆ ನೀಡಿದ್ಧಾರೆ.

ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ಬಾಗೇಶಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಅವರು, ಹೆಚ್ಚು ಜನರನ್ನು ಸೇರಿಸಿದ್ದೀರಾ, ಇಂತಹ ಸಂದರ್ಭದಲ್ಲಿ ನಾಲ್ಕಾರು ಮಾತುಗಳನ್ನು ಆಡದೆ ಹೋದರೆ ತಪ್ಪಾಗುತ್ತೆ. ಇಂದಿನ‌ ರಾಜಕಾರಣದ ಸನ್ನಿವೇಶ ಪ್ರಸ್ತಾಪ ಮಾಡಲು ಹೋಗಲ್ಲ. ಈ‌ ವೇಳೆ ಕಾರ್ಯಕ್ರಮದಿಂದ ಹೊರಟ ಕೆಲವರು ಇದರಿಂದ ಕೋಪಗೊಂಡ ಅವರು, ಏಯ್ ಯಾರ್ರಿ ಅವರು, ಯಾಕೆ ತೆರೆಮರೆಗೆ ಹೋಗುತ್ತಿದ್ದೀರಾ. ಮಾತನಾಡಲು ಡಿಸ್ಟರ್ಬ್ ಆಗುತ್ತೆ, ಇಲ್ಲಾ ದೂರಕ್ಕೆ ಹೋಗಬೇಕು. ಅವರು ನಮ್ಮವರೇ, ಅಲ್ಲಿಂದ ಮಾತಡ್ಕಂಡು ಇಲ್ಲಿಗೆ ಬಂದ್ರು, ಆಗ್ಲಿಂದ ನೋಡುತ್ತಲೆ ಇದ್ದೆ.

ನನ್ನ ಬಳಿ ಬಂದು ಗಂಟೆಗಟ್ಟಲೆ ಕುಳಿತು ಕೆಲಸ‌ ಮಾಡಿಸಿಕೊಂಡಿಸಿರುವವರು ನೀವು. ಅದನ್ನು ನಾನು ಹಿಂಸೆ ಎಂದು ಭಾವಿಸಲ್ಲ, ಪ್ರೀತಿ ಅಂದುಕೊಳ್ತಿನಿ. ನಾನೇನು ಮಾಡಿದ್ದೀನಿ ಅಂತ ಕೇಳುವವರಿಗೆ ನೀವು ಉತ್ತರ ಹೇಳಿ. ಅರಸೀಕೆರೆ ಪಿಪಿ ಸರ್ಕಲ್‌ನವರಿಗೆ ನೀವು ನಿಂತು ಉತ್ತರ ಹೇಳಬೇಕು. ಹೇಮಾವತಿ ನದಿಯಿಂದ ಕುಡಿಯುವ ನೀರು, ಎತ್ತಿನಹೊಳೆ ಯೋಜನೆಯನ್ನು ಅರಸೀಕೆರೆ ವಿಧಾನಸಭಾ ಕ್ಷೇತ್ರಕ್ಕೆ ತಂದಿದ್ದೇನೆ. ನನಗೆ ರಾಜಕೀಯವಾಗಿ ಶಕ್ತಿ ತುಂಬಿ. ನನ್ನ ರಾಜಕಾರಣದಲ್ಲಿ ಅರಸೀಕೆರೆ ತಾಲ್ಲೂಕಿನ ಎಲ್ಲಾ ಕೆರೆಕಟ್ಟೆಗಳು ತುಂಬಿ ಕೋಡಿ ಬೀಳಬೇಕು ಎನ್ನುವ ಆಸೆಯಿದೆ. ಅದನ್ನು ಮಾಡಲು ಹೆಚ್ಚಿನ ರೀತಿಯ ಸಹಕಾರ ಕೊಡಬೇಕು ಎಂದು ತಮ್ಮ ಅವಧಿಯಲ್ಲಿ ನಡೆದ ಅಭಿವೃದ್ಧಿ ಕಾರ್ಯಕ್ರಮ ಪ್ರಸ್ತಾಪಿಸಿ ಕಾರ್ಯಕರ್ತರು ನನ್ನ ಬೆಂಬಲಕ್ಕೆ ನಿಲ್ಲಿ ಎಂದು ಮನವಿ ಮಾಡಿದರು.

RELATED ARTICLES

Related Articles

TRENDING ARTICLES