Sunday, December 22, 2024

ಮುಸ್ಲಿಂರೆಲ್ಲಾ ಭಯೋತ್ಪಾದಕರಲ್ಲ ಆದ್ರೆ : ಪ್ರತಾಪ್​​ ಸಿಂಹ

ಮೈಸೂರು: ಮುಸ್ಲಿಂರೆಲ್ಲಾ ಭಯೋತ್ಪಾದಕರಲ್ಲ. ಆದರೆ, ಭಯೋತ್ಪಾದಕರೆಲ್ಲಾ ಮುಸ್ಲಿಂರೇ ಆಗಿದ್ದಾರೆ. ಒಳ್ಳೆಯ ಮುಸ್ಲಿಂರು ಈಗ ಯಾಕೆ ಮಾತಾನಾಡುತ್ತಿಲ್ಲ ಎಂದು ಮೈಸೂರಿನಲ್ಲಿ ಸಂಸದ ಪ್ರತಾಪ್ ಸಿಂಹ ಕಿಡಿಕಾಡಿದ್ದಾರೆ.

ನೂಫುರ್ ಶರ್ಮಾರನ್ನು ಬೆಂಬಲಿಸಿದ ವ್ಯಕ್ತಿಯ ಹತ್ಯೆ ವಿಚಾರಕ್ಕೆ ಸಂಬಂಧಿಸಿದಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹತ್ಯೆ ಪೈಶಾಚಿಕವಾದ ಕೊಲೆ. ಮುಸ್ಲಿಂ ಮೂಲಭೂತ ವಾದಿಗಳು ದೇಶದ ಶಾಂತಿ ಕೆಡಿಸುವ ಯತ್ನವಿದು. ದನಗಳ್ಳರಿಗೆ ಎರಡೇಟು ಬಿದ್ದರೆ. ಆಕಾಶ ಭೂಮಿ ಒಂದಾಗುವ ರೀತಿ ಬೊಬ್ಬೆ ಹಾಕುವವರು ಈಗ ಎಲ್ಲಿದ್ದಾರೆ? ಏನ್ಮಾಡ್ತಿದ್ದಾರೆ? ಬ್ರದರ್ ಬ್ರದರ್ ಎಂದು ಹೇಳುವ ಕಾಂಗ್ರೆಸ್ ನಾಯಕ ಈಗ ಯಾವ ಬಿಲದಲ್ಲಿ ಅಡಗಿದ್ದಾರೆ. ಟ್ವೀಟ್ ಮಾಡಿ ಮನೆಯೊಳಗೆ ಕುಳಿತರೆ ಮುಗಿತಾ ನಿಮ್ಮ ಕೆಲಸ? ಕರ್ನಾಟಕದಲ್ಲೂ ಕಾಂಗ್ರೆಸ್​​ಗೆ ಅಧಿಕಾರ ಕೊಟ್ಟರೆ ರಾಜಸ್ಥಾನದ ಘಟನೆ ಕರ್ನಾಟಕದಲ್ಲೂ ಆಗುತ್ತೆ. ಇದು ರಾಜ್ಯದ ಜನರಿಗೆ ಎಚ್ಚರಿಕೆ ಗಂಟೆ ಇದ್ದ ಹಾಗೇ ಎಂದು ತಿಳಿಸಿದರು.

ಈ ಘಟನೆಯಿಂದ ಟಿಪ್ಪು ಸಂತತಿಗಳ ಬಗ್ಗೆ ಮತದಾರರು ಜಾಗೃತರಾಗಿರಬೇಕು. ರಾಜಸ್ಥಾನ ಸರಕಾರದ ಮೇಲೆ ನನಗೆ ವಿಶ್ವಾಸವಿಲ್ಲ. ಹಿಂದೂಗಳ ಧ್ವನಿ ಅಡಗಿಸಲು ಈ ಕೃತ್ಯ ನಡೆದಿದೆ. ಈ ಕೃತ್ಯದ ಹಿಂದೆ ಕಾಂಗ್ರೆಸ್ ಇದೆ. ಕಾಂಗ್ರೆಸ್​​ನವರ ಮುಸ್ಲಿಂ ಓಲೈಕೆಯಿಂದ ಈ ರೀತಿ ನಡೆಯುತ್ತಿದೆ. ಸಿದ್ದರಾಮಯ್ಯ ಸರ್ ರಾಜಸ್ಥಾನ ಸರ್ಕಾರಕ್ಕೆ ಸ್ವಲ್ಪ ಬುದ್ದಿ ಹೇಳುತ್ತೀರಾ ಎಂದು ವ್ಯಂಗ್ಯವಾಡಿದರು.

ಒಳ್ಳೆಯ ಮುಸ್ಲಿಂರು ಮೌನವಾಗಿ ಇದಕ್ಕೆ ಕುಮ್ಮುಕು ಕೊಡುತ್ತಿದ್ದಾರಾ? ಇನ್ನೂ ನೀವು ಧ್ವನಿ ಎತ್ತದಿದ್ದರೆ ನಿಮ್ಮ ಮೇಲೂ ಅನುಮಾನ ಮೂಡುತ್ತದೆ. ಈಗ ಮೌಲಿಗಳು, ಮುಲ್ಲಾಗಳು ಎಲ್ಲಿ ಹೋಗಿದ್ದಾರೆ. ಈ ಕೊಲೆ ತಪ್ಪು ಅಂತಾ ಆರೋಪಿಗಳ ವಿರುದ್ಧ ಫತ್ವಾ ಹೊರಡಿಸಲಿ ನೋಡೋಣಾ? ಶುಕ್ರವಾರ ಪ್ರಾರ್ಥನೆಯಾದ ನಂತರ ಕಲ್ಲು ಬಿಸಾಕುವುದು ಹೇಳಿ ಕೊಡುವುದಷ್ಟೆ ನಿಮ್ಮ ಕೆಲಸವಾ? ಎಂದು ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದರು.

RELATED ARTICLES

Related Articles

TRENDING ARTICLES