Thursday, January 23, 2025

ಉದಯಪುರ ಹತ್ಯೆ ಪ್ರಕರಣ; ಅಂತರರಾಷ್ಟ್ರೀಯ ಷಡ್ಯಂತ್ರ ಇದೆ: ಸಿಎಂ ಬೊಮ್ಮಾಯಿ

ಬೆಂಗಳೂರು: ಉದಯಪುರ ಹತ್ಯೆ ಇದರ ಹಿಂದೆ ಅಂತರರಾಷ್ಟ್ರೀಯ ಷಡ್ಯಂತ್ರ ಇದೆ ಎಂದು ಸಿ ಎಂ ಬಸವರಾಜ ಬೊಮ್ಮಾಯಿ ಅವರು ಪ್ರತಿಕ್ರಿಯಿಸಿದರು.

ಉದಯಪುರದಲ್ಲಿ ಕನ್ಹಯ್ಯಾ ಲಾಲ್ ಹತ್ಯೆ ವಿಚಾರಕ್ಕೆ ಸಂಬಂಧಿಸಿದಂತೆ ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉದಯಪುರದ ಘಟನೆ ಅಮಾನವೀಯ ಹೇಯ ಕೃತ್ಯ. ಇದೊಂದು ಭಯೋತ್ಪಾದಕ ಕೃತ್ಯವಾಗಿದೆ. ಹಲ್ಲೆಮಾಡಿದವರನ್ನು ಗಲ್ಲಿಗೇರಿಸುವಂತೆ ಆಗ್ರಹಿಸಿದ್ದಾರೆ. ಇದರ ಹಿಂದೆ ಅಂತರರಾಷ್ಟ್ರೀಯ ಷಡ್ಯಂತ್ರ ಇದೆ. ಹೀಗಾಗಿ ರಾಜಸ್ಥಾನ ಸರ್ಕಾರ ಕ್ರಮ ತೆಗೆದುಕೊಂಡು ಹತ್ಯೆ ಹಿಂದೆ ಯಾರಿದ್ದಾರೆ ಅನ್ನೊದನ್ನು ತನಿಖೆ ಆಗಬೇಕು. ಇದರ ಹಿಂದೆ ಯಾವ ಸಂಘಟನೆ ಇದೆ ಅನ್ನೋದು ಗೊತ್ತಾಗಬೇಕು ಎಂದು ಕಿಡಿಕಾಡಿದ್ದಾರೆ.

ಚಂಡೀಘಡ ಜಿಎಸ್ಟಿ ಮಂಡಳಿ ಸಭೆ ಕುರಿತು ಪ್ರತಿಕ್ರಿಯಿಸಿ, ಸಭೆಯಲ್ಲಿ ಹಲವು ವಿಚಾರಗಳ ಚರ್ಚೆ ಮಾಡಲಾಗಿದೆ. ಕಾನೂನಿನ ತೊಡಕುಗಳನ್ನು ನಿವಾರಣೆ ಮಾಡಲು ಬಹುತೇಕ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ. ರಾಜ್ಯಗಳಿಗೆ ಜಿಎಸ್ಟಿ ಪರಿಹಾರದ ಅವಧಿ ವಿಸ್ತರಣೆ ಬಗ್ಗೆ ಚರ್ಚೆ ಆಗಿದೆ. ಆಗಸ್ಟ್ ತಿಂಗಳಲ್ಲಿ ಇದರ ಬಗ್ಗೆ ತಿಳಿಸೋದಾಗಿ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ ಎಂದು ಮಾಹಿತಿ ತಿಳಿಸಿದ್ದಾರೆ.

RELATED ARTICLES

Related Articles

TRENDING ARTICLES