Friday, November 8, 2024

ಹೊಸ ಸರ್ಕಾರ ರಚನೆ ಉಸ್ತುವಾರಿ ಹೊತ್ತ ಸಿ.ಟಿ ರವಿ

ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಸ್ಥಾನಕ್ಕೆ ಉದ್ಧವ್ ಠಾಕ್ರೆ ರಾಜೀನಾಮೆ ಕೊಟ್ಟಿದ್ದಾರೆ. ಎರಡೂವರೆ ವರ್ಷದ ಮಹಾ ಆಘಾಡಿ ಸರ್ಕಾರ ಪತನಗೊಂಡಿದೆ.

ಸೋಲೊಪ್ಪಿಕೊಂಡ ಉದ್ಧವ್ ಠಾಕ್ರೆ ಇವತ್ತಿನ ವಿಶ್ವಾಸಮತಕ್ಕೂ ಮುನ್ನ ನಿನ್ನೆ ರಾತ್ರಿಯೇ ರಾಜೀನಾಮೆ ಘೋಷಿಸಿದ್ರು. ರಾಜ್ಯಪಾಲರು ಠಾಕ್ರೆ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ. ಶಿಂಧೆ ಬಣದೊಂದಿಗೆ ಮಹಾರಾಷ್ಟ್ರದಲ್ಲೂ ಕಮಲ ಅರಳುವುದು ಬಹುತೇಕ ಪಕ್ಕಾ ಆಗಿದೆ. ಠಾಕ್ರೆ ರಾಜೀನಾಮೆ ನೀಡುತ್ತಿದ್ದಂತೆ ಫಡ್ನವೀಸ್‍ಗೆ ಸಿಹಿ ತಿನ್ನಿಸಿ ಬಿಜೆಪಿ ಕಾರ್ಯಕರ್ತರು ಸಂಭ್ರಮಿಸಿದ್ರು.

ಜುಲೈ 1ಕ್ಕೆ ರೆಬೆಲ್ಸ್ ಬೆಂಬಲಿತ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರುವ ನಿರೀಕ್ಷೆ ಇದೆ. ಇತ್ತ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿಗೆ ಹೈಕಮಾಂಡ್ ಮುಂಬೈಗೆ ಬರುವಂತೆ ಬುಲಾವ್ ನೀಡಿದೆ. ರವಿ ಮಹಾರಾಷ್ಟ್ರ, ಗೋವಾ, ತಮಿಳನಾಡಿನಲ್ಲಿ ಪಕ್ಷದ ಉಸ್ತುವಾರಿ ಆಗಿದ್ದಾರೆ.

RELATED ARTICLES

Related Articles

TRENDING ARTICLES