Friday, November 22, 2024

ಅಘಾಡಿ ಸರ್ಕಾರ ಪತನ: ನಾಳೆಯೇ ನೂತನ ಸಿಎಂ ಆಗಿ ಫಡ್ನವಿಸ್ ಪ್ರಮಾಣವಚನ!

ನವದೆಹಲಿ: ಇಂದು ಎಲ್ಲವೂ ಅಂದುಕೊಂಡಂತೆ ಆದರೆ ನಾಳೆಯೇ ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವಿಸ್ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ನಂತರ ಎರಡು ಮೂರು ದಿನಗಳಲ್ಲಿ ವಿಧಾನಸಭೆಯ ಅಧಿವೇಶನ ಕರೆದು ವಿಶ್ವಾಸಮತಯಾಚನೆ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.

ಮಹಾರಾಷ್ಟ್ರದ ಮುಖ್ಯಮಂತ್ರಿ ಸ್ಥಾನಕ್ಕೆ ಉದ್ಧವ್ ಠಾಕ್ರೆ ಬುಧವಾರ ರಾತ್ರಿ ರಾಜೀನಾಮೆ ಘೋಷಿಸಿದ ಬೆನ್ನಲ್ಲೇ ಬಿಜೆಪಿ ಸರ್ಕಾರ ರಚನೆಯ ಕಸರತ್ತು ನಡೆಸಿದೆ. ಇಂದು ಮಹಾರಾಷ್ಟ್ರ ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ದೇವೇಂದ್ರ ಫಡ್ನವಿಸ್ ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ಅವರನ್ನು ಭೇಟಿ ಮಾಡಿ ಬಿಜೆಪಿ ಸರ್ಕಾರ ರಚನೆಯ ಹಕ್ಕನ್ನು ಪ್ರತಿಪಾದಿಸಲಿದ್ದಾರೆ ಎಂದು ತಿಳಿದುಬಂದಿದೆ.

ಮಹಾರಾಷ್ಟ್ರ ವಿಧಾನಸಭೆಯಲ್ಲಿ ಬಿಜೆಪಿ ಅತಿದೊಡ್ಡ ಪಕ್ಷವಾಗಿರುವ ಮತ್ತು ಇದೀಗ ಬಂಡಾಯ ನಾಯಕ ಏಕನಾಥ್ ಶಿಂಧೆ ಬಣದ ಬೆಂಬಲವನ್ನೂ ಹೊಂದಿರುವ ಬಿಜೆಪಿಗೆ ಸರ್ಕಾರ ರಚನೆ ಮಾಡಲು ಅವಕಾಶ ನೀಡುವಂತೆ ಕೇಳಿಕೊಳ್ಳಲಿದ್ದಾರೆ. ಅಗತ್ಯ ಬಿದ್ದರೆ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಅವರಿಗೆ ಏಕನಾಥ್ ಶಿಂಧೆ ಬಣ ಬಿಜೆಪಿಗೆ ನೀಡಿರುವ ಬೆಂಬಲ ಪತ್ರವನ್ನು ಕೊಡಲಿದ್ದಾರೆ. ಅಲ್ಲದೆ ನಾಳೆಯೇ ಪ್ರಮಾಣವಚನ ಬೋಧಿಸುವಂತೆಯೇ ಕೇಳಿಕೊಳ್ಳಲಿದ್ದಾರೆ ಎಂಬ ಮಾಹಿತಿ ತಿಳಿಸಿದ್ದಾರೆ.

RELATED ARTICLES

Related Articles

TRENDING ARTICLES