Friday, January 24, 2025

ದಕ್ಷಿಣ ಕನ್ನಡ & ಕರಾವಳಿಯಲ್ಲಿ ಭಾರೀ ಮಳೆ

ಮಂಗಳೂರು : ದಕ್ಷಿಣ ಕನ್ನಡ ಸೇರಿದಂತೆ ಕರಾವಳಿಯಲ್ಲಿ ಭಾರೀ ಮಳೆಯಾಗಿದೆ. ಮಂಗಳೂರು ನಗರದ ಹಲವೆಡೆ ರಸ್ತೆಗಳಲ್ಲಿ ಕೃತಕ ನೆರೆ ಉಂಟಾಗಿದೆ. ಕೊಟ್ಟಾರದಲ್ಲಿ ರಾಷ್ಟ್ರೀಯ ಹೆದ್ದಾರಿಗೂ ನೀರು ಬಂದಿದೆ.

ಕೊಟ್ಟಾರ ಪ್ರದೇಶದ ಮಾಲೆಮಾರ್, ಕೋಡಿಕಲ್ ಏರಿಯಾದಲ್ಲಿ ರಸ್ತೆಯಲ್ಲಿ ಭಾರೀ ಪ್ರಮಾಣದ ನೀರು ಹರಿದಿದ್ದು ಹಲವಾರು ಮನೆಗಳಿಗೆ ಮಳೆ ನೀರು ನುಗ್ಗಿದೆ. ನೀರುಮಾರ್ಗದ ಬಳಿಯ ಬದಿನಡಿ ಎಂಬಲ್ಲಿ ದೇವಸ್ಥಾನದ ಅಂಗಣ ಪೂರ್ತಿ ನೀರಿನಲ್ಲಿ ಮುಳುಗಿದೆ. ರಾತ್ರಿಯಿಡೀ ಭಾರೀ ಮಳೆಯಾಗಿದ್ದರಿಂದ ಮಂಗಳೂರಿನ ಹಲವು ಕಡೆಗಳಲ್ಲಿ ಮನೆಗಳ ಒಳಗೆ ನೀರು ನುಗ್ಗಿದೆ. ಇದರಿಂದ ಬೆಳ್ಳಂಬೆಳಗ್ಗೆ ಸಾರ್ವಜನಿಕರು ಕಷ್ಟಕ್ಕೆ ಒಳಗಾಗಿದ್ದಾರೆ. ಹವಾಮಾನ ಇಲಾಖೆಯಿಂದ ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.

RELATED ARTICLES

Related Articles

TRENDING ARTICLES