ಒಲಿಂಪಿಕ್ ಚಾಂಪಿಯನ್ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಗುರುವಾರ ಸ್ಟಾಕ್‌ಹೋಮ್‌ನಲ್ಲಿ ನಡೆದ ಪ್ರತಿಷ್ಠಿತ ಡೈಮಂಡ್ ಲೀಗ್‌ನಲ್ಲಿ 89.94 ಮೀ. ಓಪನಿಂಗ್ ಥ್ರೋ ಮೂಲಕ ಹೊಸ ರಾಷ್ಟ್ರೀಯ ದಾಖಲೆ ಸೃಷ್ಟಿಸಿದ್ದು, ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟಿದ್ದಾರೆ.
ಜೂನ್ ತಿಂಗಳ ಆರಂಭದಲ್ಲಿ ತುರ್ಕುದಲ್ಲಿ ನಡೆದ ಪಾವೊ ನೂರ್ಮಿ ಗೇಮ್ಸ್‌ನಲ್ಲಿ ನೀರಜ್ 89.30 ಮೀ. ಜಾವೆಲಿನ್ ಎಸೆದು ತಮ್ಮದೇ ರಾಷ್ಟ್ರೀಯ ದಾಖಲೆಯನ್ನು ಮುರಿದಿದ್ದರು.ನಿನ್ನೆ ನಡೆದ ಡೈಮಂಡ್ ಲೀಗ್‌ನಲ್ಲಿ ಗ್ರೆನಡಾದ ಹಾಲಿ ವಿಶ್ವ ಚಾಂಪಿಯನ್ ಆಂಡರ್ಸನ್ ಪೀಟರ್ಸ್ ತಮ್ಮ ಮೂರನೇ ಪ್ರಯತ್ನದಲ್ಲಿ 90.31 ಮೀ ಜಾವೆಲಿನ್ ಎಸೆಯುವ ಮೂಲಕ ದಾಖಲೆ ಸೃಷ್ಟಿಸಿದ್ದಾರೆ.
ಅಂತಿಮವಾಗಿ, ಚೋಪ್ರಾ ತನ್ನ ಮೊದಲ ಪ್ರಯತ್ನವನ್ನು ಉತ್ತಮಗೊಳಿಸಲು ವಿಫಲರಾಗಿದ್ದು, ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟಿದ್ದಾರೆ.
Neeraj Chopra claims silver medal at Diamond League, breaks own national record
Read @ANI Story | https://t.co/SfFM3WffF8#NeerajChopra #DiamondLeague pic.twitter.com/6faro8MPml
— ANI Digital (@ani_digital) July 1, 2022