Monday, December 23, 2024

ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನ ; ಕಾಮುಕ ಪೊಲೀಸ್​​ ಅರೆಸ್ಟ್​​

ತುಮಕೂರು: ಮಹಿಳೆ ಮೇಲೆ ಪೊಲೀಸ್ ಕಾನ್ಸ್‌ಟೇಬಲ್ ಅತ್ಯಾಚಾರಕ್ಕೆ ಯತ್ನಿಸಿರೋ ಘಟನೆ ತಿಪಟೂರಿನಲ್ಲಿ ನಡೆದಿದೆ. ತುಮಕೂರು ಜಿಲ್ಲೆ ತಿಪಟೂರು ತಾಲ್ಲೂಕಿನ ಕೆ.ಬಿ ಕ್ರಾಸ್ ಪೊಲೀಸ್ ಠಾಣೆಯ ಪೊಲೀಸ್ ಕಾನ್ಸ್ ಟೇಬಲ್ ಮಂಜುನಾಥ್ ಬಂಧಿತ ಪೊಲೀಸ್ ಸಿಬ್ಬಂದಿಯಾಗಿದ್ದಾನೆ.

ಕಿಬ್ಬನಹಳ್ಳಿ ಪೊಲೀಸ್ ಠಾಣೆಯ ಮಂಜುನಾಥ್, ತಿಪಟೂರು ಡಿವೈಎಸ್ಪಿಗೆ ಎಸ್ ಬಿ ಕಾನ್ ಸ್ಟೇಬಲ್ ಆಗಿ ಕೆಲಸ ಮಾಡ್ತುತ್ತಿದ್ದ ಎನ್ನಲಾಗಿದೆ.  ಅಲ್ಲದೇ ಕಳೆದ ಜೂನ್ 28 ರಂದು ಬೆಳಗ್ಗೆ 10 ಗಂಟೆಗೆ ಕಿಬ್ಬನಹಳ್ಳಿಯಲ್ಲಿ ಹೋಟೆಲ್ ನಡೆಸಿಕೊಂಡಿದ್ದ ಸಂತ್ರಸ್ತ ಮಹಿಳೆಯೊಂದಿಗೆ ಅಸಭ್ಯ ವರ್ತನೆ ತೋರಿದ್ದಾನೆ.

ಸಂತ್ರಸ್ತ ಮಹಿಳೆಯ ಗಂಡ ತಿಪಟೂರಿಗೆ ಹೋಟೆಲ್ ಸಾಮಾನುಗಳನ್ನ ತರಲು ಹೋದ ವೇಳೆ, ತಿಂಡಿ ತಿನ್ನುವ ನೆಪದಲ್ಲಿ ಹೋಟೆಲ್ ಬಳಿ ಬಂದಿದ್ದ ಮಂಜುನಾಥ್, ಮಹಿಳೆಯ ಜೊತೆ ಅನುಚಿತವಾಗಿ ವರ್ತಿಸಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಜೊತೆಗೆ ಸೆಕ್ಸ್‌ಗೆ ಸಹಕರಿಸದಿದ್ದರೇ ಹೊಟೇಲ್ ಬಂದ್ ಮಾಡಿಸೋದಾಗಿ ಮಹಿಳೆಗೆ ಕೊಲೆ ಬೆದರಿಕೆಯನ್ನೂ ಹಾಕಿದ್ದಾನೆ.

ಸಂತ್ರಸ್ತ ಮಹಿಳೆ ಕೂಡಲೇ ತನ್ನ ಪತಿಗೆ ಕರೆ ಮಾಡಿ ಮಾಹಿತಿ ತಿಳಿಸಿದ್ದಾರೆ. ಬಳಿಕ ಘಟನೆ ಸಂಬಂಧ ಕಿಬ್ಬನಹಳ್ಳಿ ಪೊಲೀಸ್ ಠಾಣೆಗೆ ಸಂತ್ರಸ್ತೆ ದೂರು ನೀಡಿದ್ದಾರೆ. ಮಹಿಳೆಯ ದೂರಿನ ಆಧಾರದ ಮೇಲೆ ಐಪಿಸಿ ಸೆಕ್ಷನ್ 354(a), 354(b), 448, 506,509, ಪ್ರಕರಣದಡಿ ಕೇಸ್ ದಾಖಲಾಗಿದೆ.

ಸದ್ಯ ಪೊಲೀಸ್ ಕಾನ್ ಸ್ಟೇಬಲ್ ಮಂಜುನಾಥ್​​ನನ್ನು ಬಂಧಿಸಿ ತುಮಕೂರು ಜಿಲ್ಲಾ ಕಾರಾಗೃಹಕ್ಕೆ ಕಳುಹಿಸಲಾಗಿದೆ.

RELATED ARTICLES

Related Articles

TRENDING ARTICLES