Sunday, November 3, 2024

ಹೋರಾಟಗಾರ್ತಿ ತೀಸ್ತಾಗೆ 14 ದಿನಗಳ ಬಂಧನ

ಗುಜರಾತ್​ : 2002ರ ಗುಜರಾತ್ ಗಲಭೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಸಾಕ್ಷ್ಯಾಧಾರಗಳನ್ನು ಸೃಷ್ಟಿಸಿದ ಆರೋಪದಲ್ಲಿ ಬಂಧಿತ ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್ ಮತ್ತು ಮಾಜಿ ಪೊಲೀಸ್ ಮಹಾನಿರ್ದೇಶಕ ಆರ್ ಬಿ ಶ್ರೀಕುಮಾರ್ ಅವರನ್ನು ಇಲ್ಲಿನ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ.

ಪೊಲೀಸ್ ಕಸ್ಟಡಿ ಮುಗಿದ ನಂತರ ಇಬ್ಬರನ್ನು ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಎಸ್ ಪಿ ಪಟೇಲ್ ಮುಂದೆ ಹಾಜರುಪಡಿಸಲಾಗಿತ್ತು. ಈ ವೇಳೆ ಪೊಲೀಸರು ಹೆಚ್ಚಿನ ವಿಚಾರಣೆಗಾಗಿ ಹೆಚ್ಚಿನ ಕಸ್ಟಡಿಗೆ ಮನವಿ ಮಾಡಿಲ್ಲ ಎಂದು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಅಮಿತ್ ಪಟೇಲ್ ಹೇಳಿದ್ದಾರೆ.

ಅಹಮದಾಬಾದ್ ಪೊಲೀಸ್ ಅಪರಾಧ ವಿಭಾಗವು ಕಳೆದ ಶನಿವಾರ ದಾಖಲಿಸಿದ ಪ್ರಥಮ ಮಾಹಿತಿ ವರದಿ ಮೇಲೆ ಸೆಟಲ್ವಾಡ್ ಮತ್ತು ಶ್ರೀಕುಮಾರ್ ಅವರನ್ನು ಬಂಧಿಸಲಾಗಿತ್ತು. ‘ತನಿಖಾಧಿಕಾರಿಯು ಯಾವುದೇ ಹೆಚ್ಚಿನ ಕಸ್ಟಡಿಗೆ ಕೇಳಲಿಲ್ಲ. ಆದ್ದರಿಂದ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ’ ಎಂದು ಪ್ರಾಸಿಕ್ಯೂಟರ್ ಪಟೇಲ್ ಹೇಳಿದರು.

RELATED ARTICLES

Related Articles

TRENDING ARTICLES