Monday, December 23, 2024

ನಾಡಪ್ರಭು ಕೆಂಪೇಗೌಡರ 513ನೇ ಜಯಂತೋತ್ಸವ

ಬೆಂಗಳೂರು : ಆರ್.ಟಿ ನಗರದ ಹೆಚ್.ಎಂ.ಟಿ ಮೈದಾನದಲ್ಲಿ ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಸ್ವಾಮೀಜಿಗಳು ಶ್ರೀ ಚಂದ್ರಶೇಖರನಾಥ ಸ್ವಾಮೀಜಿ ಹಾಗೂ ಶ್ರೀ ರಮಣಾನಂದ ಸ್ವಾಮೀಜಿಗಳ ದಿವ್ಯ ಸಾನಿಧ್ಯದಲ್ಲಿ ಹೆಬ್ಬಾಳ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಬೈರತಿ ಸುರೇಶ್ ರವರ ಅಧ್ಯಕ್ಷತೆಯಲ್ಲಿ ಇಂದು ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರ 513ನೇ ಜಯಂತೋತ್ಸವವನ್ನು ಆಚರಿಸಲಾಯಿತು.

ಇದಕ್ಕೂ ಮೊದಲು ಸಂಜಯನಗರದ ಗೆದ್ದಲಹಳ್ಳಿಯಲ್ಲಿರುವ ಕೆಂಪೇಗೌಡರು ಹಾಗೂ ಡಾ||ಬಿ.ಆರ್. ಅಂಬೇಡ್ಕರ್ ರವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಮಾನ್ಯ ಶಾಸಕರಾದ ಶ್ರೀ ಬೈರತಿ ಸುರೇಶ್ ರವರ ನೇತೃತ್ವದಲ್ಲಿ ಸಾವಿರಾರು ಬೈಕ್ ಗಳಿಂದ ಬೈಕ್ ರ್ಯಾಲಿ ಮೂಲಕ ಕ್ಷೇತ್ರದೆಲ್ಲೆಡೆ ಸಂಚರಿಸಿ ಹೆಚ್.ಎಂ.ಟಿ ಮೈದಾನಕ್ಕೆ ಆಗಮಿಸಲಾಯಿತು.

ಕಾರ್ಯಕ್ರಮದಲ್ಲಿ ಕೆಂಪೇಗೌಡರ ಜೀವನ ಚರಿತ್ರೆಯ ವಿವರಣೆ, ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಮಹನೀಯರಿಗೆ ಸನ್ಮಾನ ಹಾಗೂ ಅನೇಕ ಮನರಂಜನಾ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.

ಈ ಸಂದರ್ಭದಲ್ಲಿ ಕ್ಷೇತ್ರದ ಮಾಜಿ ಬಿಬಿಎಂಪಿ ಸದಸ್ಯರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ವಾರ್ಡ್ ಅಧ್ಯಕ್ಷರು, ಪಕ್ಷದ ಮುಖಂಡರು, ಕೆಂಪೇಗೌಡರ ಅಭಿಮಾನಿಗಳು, ಒಕ್ಕಲಿಗ ಸಮಾಜದ ಮುಖಂಡರು, ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು, ಸಾರ್ವಜನಿಕರು ಹಾಜರಿದ್ದರು.

RELATED ARTICLES

Related Articles

TRENDING ARTICLES