ಬೆಂಗಳೂರು : ಕರಾವಳಿ ಭಾಗದಲ್ಲಿ ಮುಂಗಾರು ಮಾರುತಗಳು ಹೆಚ್ಚು ಸಕ್ರಿಯವಾಗಿದ್ದರಿಂದ ಜುಲೈ 8ರವರೆಗೂ ಗುಡುಗು ಸಹಿತ ಭಾರೀ ಮಳೆ ಇರಲಿದೆ ಎಂದು ಹವಮಾನ ಇಲಾಖೆ ಎಚ್ಚರಿಸಿದೆ.
ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಜುಲೈ 8 ರವರೆಗೂ ಮತ್ತೆ ಮಳೆ ಬೀಳುವ ಸಾಧ್ಯತೆ ಇದೆ. ಜುಲೈ 5 ಮತ್ತು 6 ರಂದು ಮಳೆಯ ತೀವ್ರತೆ ಹೆಚ್ಚಾಗುತ್ತೆ. ಹಾಗೆನೇ ಕರಾವಳಿಯ ಮೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದ್ದಾರೆ.
ಇನ್ನು, ಉಳಿದ ದಿನ ‘ಯೆಲ್ಲೋ ಅಲರ್ಟ್’ ನೀಡಲಾಗಿದ್ದು, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಮತ್ತು ಹಾಸನ ಜಿಲ್ಲೆಗಳಲ್ಲಿ ಮಳೆ. ಜುಲೈ 5ರವರೆಗೂ ಗುಡುಗು ಸಹಿತ ಭಾರೀ ಮಳೆ ಬೀಳಲಿದೆ. ಹೀಗಾಗಿ ಐದು ದಿನವು ಈ ಜಿಲ್ಲೆಗಳು ‘ಯೆಲ್ಲೋ ಅಲರ್ಟ್ ಘೋಷಣೆ ಮಾಡಿದ್ದಾರೆ.