Monday, December 23, 2024

ಸಿದ್ದರಾಮಯ್ಯಗೆ ಅಡ್ವಾನ್ಸ್ ಆಗಿ ವಿಶ್ ಮಾಡಿದ ಜಿಟಿ ದೇವೇಗೌಡ

ಮೈಸೂರು : ಆಹ್ವಾನ ಪತ್ರಿಕೆ ಬರಲಿ ಬಿಡಲಿ ನಾನು ಸಿದ್ದರಾಮಯ್ಯ ಅವರಿಗೆ ಸ್ವಲ್ಪದಿನ ಮುಂಚಿತವಾಗಿಯೇ ನಾನು ಅವರಿಗೆ ಹುಟ್ಟುಹಬ್ಬದ ಶುಭ ಕೋರುತ್ತೇನೆ ಎಂದು ಶಾಸಕ ಜಿ.ಟಿ ದೇವೇಗೌಡ ಹೇಳಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಾಮುಂಡಿ ಹಾಗು ದಸರಾ ಪ್ರಾಧಿಕಾರ ಆಗಲೇಬೇಕು. ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರುಗೂ ತಿಳಿಸಿದ್ದೇನೆ. ದಸರಾ ವಸ್ತು ಪ್ರದರ್ಶನ ಪ್ರಾಧಿಕಾರ ರಾಜ್ಯ ಮಟ್ಟದ ಪ್ರಾಧಿಕಾರ ಆಗಿದೆ. ಪ್ರತ್ಯೇಕ ಪ್ರಾಧಿಕಾರ ಮಾಡಬೇಕು. ಮೈಸೂರಿನ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ಪ್ರಾಧಿಕಾರ ಆಗಲೆಬೇಕು ಎಂದು ಒತ್ತಾಯ ಮಾಡಿದ್ದಾರೆ.

ಇನ್ನು, ಎರಡು ತಿಂಗಳ ನಂತರ ನನ್ನ ಮುಂದಿನ ರಾಜಕೀಯ ತೀರ್ಮಾನಿಸಲಾಗಿದ್ದು, ಎರಡು ತಿಂಗಳ ನಂತರ ಕ್ಷೇತ್ರದ ಜನರ ಸಭೆ ಕರೆಯುತ್ತೇನೆ. ಸಭೆಯಲ್ಲಿ ಮುಕ್ತ ಚರ್ಚೆ ಮಾಡುತ್ತೇನೆ. ಜನರ ಅಭಿಪ್ರಾಯದಂತೆ ನನ್ನ ನಿರ್ಧಾರ ಪ್ರಕಟಿಸುತ್ತೇನೆ. ಇದರಲ್ಲಿ ಯಾವ ಗೊಂದಲಗಳು ಇಲ್ಲ. ಐದು ವರ್ಷ ನಾನು ಜೆಡಿಎಸ್ ಶಾಸಕನಾಗಿ ಜನ ಮತ ಹಾಕಿದ್ದಾರೆ. ಹೀಗಾಗಿ ಯಾವುದೇ ಚುನಾವಣೆಯಲ್ಲಿ ಪಕ್ಷ ವಿಪ್ ಕೊಡಲಿ ಬಿಡಲಿ, ನಾನು ಜೆಡಿಎಸ್ ಪರವಾಗಿ ಮತ ಹಾಕುತ್ತೇನೆ. ಯಾಕೆಂದರೆ ನನ್ನ ಆತ್ಮಸಾಕ್ಷಿ ಗೆ ದ್ರೋಹ ಬಗೆಯುವ ಕೆಲಸ ಯಾವತ್ತೂ ಮಾಡುವುದಿಲ್ಲ. ಕಳೆದ ಮೂರು ವರ್ಷಗಳಿಂದ ಪಕ್ಷದ ಯಾವುದೇ ಚಟುವಟಿಕೆಯಲ್ಲಿ ಭಾಗವಹಿಸಿಲ್ಲ ಎಂದರು.

RELATED ARTICLES

Related Articles

TRENDING ARTICLES