Thursday, January 23, 2025

ಕೊಡಗಿನಲ್ಲಿ ವರುಣನ ಅಬ್ಬರ

ಮಡಿಕೇರಿ : ಕೊಡಗಿನಲ್ಲಿ ವರುಣನ ಆರ್ಭಟ ಮುಂದುವರೆದಿದೆ. ಬ್ರಹ್ಮಗಿರಿ ತಪ್ಪಲಿನಲ್ಲಿ ಎಡಬಿಡದೆ ಮಳೆ ಸುರಿಯುತ್ತಿದ್ದು, ಕಾವೇರಿ ನದಿ ನೀರಿನ‌ ಮಟ್ಟ ಗಣನೀಯ ಏರಿಕೆಯಾಗಿದೆ.

ಭಾರೀ ಮಳೆ ಹಿನ್ನೆಲೆಯಲ್ಲಿ ಮಡಿಕೇರಿ ತಾಲೂಕಿನ ಭಾಗಮಂಡಲ-ನಾಪೋಕ್ಲು ರಸ್ತೆ ಜಲಾವೃತವಾಗಿದೆ. ರಸ್ತೆ ಮೇಲೆ 2 ರಿಂದ ಮೂರು ಅಡಿ ನೀರು ನಿಂತಿದ್ದು, ಭಾಗಮಂಡಲ-ಮಡಿಕೇರಿ ರಸ್ತೆ ಬಂದ್ ಆಗುವ ಸಾಧ್ಯತೆ ಇದೆ. ಹಲವೆಡೆ ವಿದ್ಯುತ್​ ಕಂಬಗಳು ಧರೆಗುರುಳಿದ್ದು, ಜನರು ಪರದಾಡುವಂತಾಗಿದೆ.

ಕೋರಂಗಾಲದ ವಾಜಪೇಯಿ ವಸತಿ ಶಾಲೆಗೆ ಮಾತ್ರ 8 ದಿನಗಳು ರಜೆ ಘೋಷಣೆ ಮಾಡಲಾಗಿದೆ. ರಸ್ತೆಗೆಅಡ್ಡಲಾಗಿ ಬಿದ್ದಿದ್ದ ಮರಗಳನ್ನು ಅರಣ್ಯ ಇಲಾಖೆ ತೆರವುಗೊಳಿಸಿ ವಾಹನ ಸಂಚಾರ ಸುಗಮಗೊಳಿಸಿದೆ. ಪದೇಪದೇ ಮಳೆಯಿಂದಾಗುವ ಅವಾಂತರಗಳಿಂದ ಕೊಡಗಿನ ಜನರು ತತ್ತರಿಸಿ ಹೋಗಿದ್ದಾರೆ.

RELATED ARTICLES

Related Articles

TRENDING ARTICLES